ಕರ್ನಾಟಕ

karnataka

ETV Bharat / business

ಬ್ಯಾಂಕಿಂಗ್ ನಿಯಂತ್ರಣ ತಿದ್ದುಪಡಿ ಮಸೂದೆ ಮಂಡಿಸಿದ ಸೀತಾರಾಮನ್​: ಕಾಂಗ್ರೆಸ್​ನಿಂದ ತೀವ್ರ ವಿರೋಧ - Congress opposed Banking Regulation Amendment Bill

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) 2020ರ ಮಸೂದೆ ಕುರಿತು ರಾಜ್ಯಸಭೆಯಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಸಚಿವರಿಗೆ ಮನವಿ ಮಾಡಿ, ಇದು ಒಕ್ಕೂಟ ವ್ಯವಸ್ಥೆಗೆ ತಕ್ಕುದಲ್ಲ. ಸಹಕಾರಿ ಬ್ಯಾಂಕ್​ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಸಮರ್ಥವಾಗಿವೆ ಎಂದರು.

Finance Minister
ನಿರ್ಮಲಾ ಸೀತಾರಾಮನ್

By

Published : Sep 16, 2020, 5:19 PM IST

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ ಅಂಗೀಕರಿಸುವ ನಿರ್ಣಯವನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ.

1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಈ ಮಸೂದೆ ಯತ್ನಿಸುತ್ತದೆ. ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಈ ತಿದ್ದುಪಡಿ ತರುತ್ತಿದ್ದೇವೆ ಎಂದು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸೀತಾರಾಮನ್ ಅವರು ಹೇಳಿದರು.

ಠೇವಣಿದಾರರನ್ನು ರಕ್ಷಿಸಲು ನಾವು ಈ ತಿದ್ದುಪಡಿ ತರಲು ಪ್ರಯತ್ನಿಸುತ್ತಿದ್ದೇವೆ. ಬ್ಯಾಂಕ್​ಗಳಲ್ಲಿನ ಕೆಲವು ದುರದೃಷ್ಟಕರ ಪರಿಸ್ಥಿತಿಯಿಂದಾಗಿ ಠೇವಣಿದಾರರು ಆಗಾಗ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. 277 ನಗರ ಸಹಕಾರಿ ಬ್ಯಾಂಕ್​ಗಳ ಆರ್ಥಿಕ ಸ್ಥಿತಿ ತೀರಾ ದುರ್ಬಲವಾಗಿದೆ ಎಂದರು.

ದೇಶದ 105 ಸಹಕಾರಿ ಬ್ಯಾಂಕ್​ಗಳು ಕನಿಷ್ಠ ನಿಯಂತ್ರಕ ಬಂಡವಾಳದ ಅಗತ್ಯವನ್ನೂ ಪೂರೈಸಲು ಸಹ ಸಾಧ್ಯವಾಗುತ್ತಿಲ್ಲ. 47 ಬ್ಯಾಂಕ್​ಗಳು ನಿವ್ವಳ ಮೌಲ್ಯ ಋಣಾತ್ಮಕವಾಗಿದೆ. 328 ನಗರ ಸಹಕಾರಿ ಬ್ಯಾಂಕ್​ಗಳು ಶೇ 15ಕ್ಕಿಂತ ಅಧಿಕ ಎನ್‌ಪಿಎ ಅನುಪಾತ ಹೊಂದಿವೆ ಎಂದು ತಿಳಿಸಿದ್ದಾರೆ.

ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಹಣಕಾಸು ಸಚಿವರಿಗೆ ಮನವಿ ಮಾಡಿದ ಅವರು, ಇದು ಒಕ್ಕೂಟ ವ್ಯವಸ್ಥೆಗೆ ಇದು ತಕ್ಕುದಲ್ಲ. ಸಹಕಾರಿ ಬ್ಯಾಂಕ್​ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಸಮರ್ಥವಾಗಿವೆ ಎಂದು ಹೇಳಿದರು.

ABOUT THE AUTHOR

...view details