ನವದೆಹಲಿ: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಗೃಹ ಇಲಾಖೆ ಇಲ್ಲಿಯವರೆಗೆ 227.61 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣೆ ದಳದಿಂದ ಈ ಅನುದಾನ ನೀಡಲಾಗಿದ್ದು, ಆ ಹಣವನ್ನು ಜಿಲ್ಲಾಧಿಕಾರಿಗಳಿಗೆ ವರ್ಗಾಯಿಸಲಾಗುತ್ತಿದೆ ಎಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿ, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಸೋಂಕು ಹಬ್ಬುವುದನ್ನು ತಡೆಯಲು ಕೇಂದ್ರ, ಅಗತ್ಯವಿರುವ ಹೆಚ್ಚುವರಿ ಅನುದಾನದ ಅವಶ್ಯಕತೆಯ ಮಾಹಿತಿ ಕೋರಿತ್ತು.
ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ಕ್ರಮವಾಗಿ 66.85 ಕೋಟಿ ಮತ್ತು 84.25 ಕೋಟಿ ರೂ. ಸೇರಿ ಒಟ್ಟು 151.10 ಕೋಟಿ ರೂ. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿತ್ತು.
ಹೆಚ್ಚುವರಿ ಅನುದಾನ ಬಿಡುಗಡೆಗೆ ಪ್ರಸ್ತಾಪ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿತ್ತು. ಜಿಲ್ಲಾಧಿಕಾರಿಗಳು ಒಟ್ಟು 126.54 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾಧಿಕಾರಗಳ ಮನವಿಯನ್ನು ಅಳೆದು ತೂಗಿ ಕೇಂದ್ರ, ಇಂದು 79.63 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾಗಿ ತಿಳಿಸಿದೆ.