ನವದೆಹಲಿ:ಬಿಜೆಪಿ ನೇತೃತ್ವದ ಎನ್ಡಿಎ ನೇತೃತ್ವ ವಹಿಸಿರುವ ಪ್ರಧಾನಿ ಮೋದಿ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370 ಹಿಂಪಡೆದ ಮೇಲೆ ಅಲ್ಲಿನ ನಾಗರಿಕರಿಗೆ ಉಡುಗೊರೆಗಳನ್ನು ನೀಡಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ದೃಷ್ಟಿಯಲ್ಲಿ ಇರಿಸಿಕೊಂಡು ದೊಡ್ಡ - ದೊಡ್ಡ ಯೋಜನೆಗಳನ್ನು ಮೋದಿ ಅವರು ಘೋಷಿಸಲಿದ್ದಾರೆ. ಕಣಿವೆ ರಾಜ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಎಂಬ ಮಾತುಗಳು ಅಧಿಕಾರಿಗಳ ವಲಯದಿಂದ ಕೇಳಿಬರುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭಿಸಬಹುದಾದ ಮೂಲ ಸೌಕರ್ಯ ಯೋಜನೆಗಳ ವಿವರವಾದ ಪಟ್ಟಿಯನ್ನು ತಯಾರಿಸಲು ಪಿಎಂಒ ಸಂಬಂಧಿತ ಸಚಿವಾಲಯಗಳಿಗೆ ಕೇಳಿದೆ ಎಂದು ಮೂಲಗಳು ತಿಳಿಸಿವೆ.