ಜೈಪುರ(ರಾಜಸ್ಥಾನ):ಆರ್ಥಿಕ ಕುಸಿತಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ಕೇಂದ್ರ ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. "ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು ಉತ್ತಮವಾಗಿ ರೂಪಿಸಲಾದ ರಾಷ್ಟ್ರೀಯ ಕಾರ್ಯತಂತ್ರಗಳು ಅಳವಡಿಸಿಕೊಳ್ಳುವ ಅಗತ್ಯವಿದೆ'' ಎಂದು ಅವರು ಪ್ರತಿಪಾದಿಸಿದ್ದಾರೆ.
ಲಕ್ಷ್ಮಿಪತ್ ವಿಶ್ವವಿದ್ಯಾನಿಲಯದಲ್ಲಿ ಮಾತನಾಡಿದ ಅವರು, ಪ್ರಸ್ತುತ ದೇಶದ ಆರ್ಥಿಕ ಎಂಜಿನ್ ನಿಧಾನವಾಗಿ ಸಾಗುತ್ತಿದೆ. ಜಿಡಿಪಿಯ ಬೆಳವಣಿಗೆ ಭಾರಿ ಕುಸಿತ ಕಂಡಿದೆ. ಹೂಡಿಕೆ ಪ್ರಮಾಣ ನಿಶ್ಚಲವಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆಯು ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ ಹಾಗೂ ನಿರುದ್ಯೋಗದ ಪ್ರಮಾಣ ಸಹ ಹೆಚ್ಚಾಗುತ್ತಿದೆ. ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸಲು ನಮಗೆ ಉತ್ತಮ ಕಲ್ಪನೆಯ ರಾಷ್ಟ್ರೀಯ ತಂತ್ರಬೇಕು ಎಂದು ಸಲಹೆ ನೀಡಿದ್ದಾರೆ.