ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆ ರೈಲು ನಿಲ್ದಾಣಗಳಲ್ಲಿ ಅನಗತ್ಯ ಜನಸಂದಣಿ ತಡೆಯುವ ಉದ್ದೇಶದಿಂದ ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಿಸಲು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ರೈಲ್ವೆ ಅಧಿಕಾರಿಗಳು ವಿಭಾಗೀಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಬೆಲೆ ₹ 3 ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ₹ 50ಕ್ಕೆ ಏರಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರು ಟಿಕೆಟ್ ದರದ ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ರೈಲ್ವೆ ಇಲಾಖೆಯು ಕೋವಿಡ್ -19 ಸಾಂಕ್ರಾಮಿಕ ವೇಳೆ ನಿಲ್ದಾಣಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಿಸಲು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ. ಸಾಂಕ್ರಾಮಿಕ ರೋಗದ ನಂತರ ಈ ನಿರ್ಧಾರ ಪರಿಶೀಲಿಸಲಾಗುವುದು ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ.