ಶಿಮ್ಲಾ:ರೋಹ್ಟಂಗ್ನಲ್ಲಿ2000ರ ಜೂನ್ 03ರಂದು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಅಡಿಪಾಯ ಹಾಕಿದ್ದ ವಿಶ್ವದ ಅತಿ ಉದ್ದದ ಹೆದ್ದಾರಿ 'ಅಟಲ್ ಸುರಂಗ' ಕಾಮಗಾರಿ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 3ರಂದು (ಶನಿವಾರ) ಬೆಳಗ್ಗೆ 10 ಗಂಟೆಗೆ ರೋಹ್ಟಂಗ್ನಲ್ಲಿ ವಿಶ್ವದ ಅತಿ ಉದ್ದದ ಹೆದ್ದಾರಿಯಾದ ಅಟಲ್ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಟಲ್ ಸುರಂಗವು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿಯ ಸುರಂಗವಾಗಿದೆ. 9.02 ಕಿ.ಮೀ ಉದ್ದದ ಈ ಸುರಂಗ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿವೆಯನ್ನು ವರ್ಷವಿಡೀ ಸಂಪರ್ಕಿಸಲಿದೆ.
ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಅತ್ಯಾಧುನಿಕ ವಿಶೇಷಣವಾದ ಅಲ್ಟ್ರಾ ಮಾಡರ್ನ್ ಸ್ಪೆಸಿಫಿಕೇಷನ್ಸ್ನಿಂದ ನಿರ್ಮಿಸಲಾಗಿದ್ದು, ಇದನ್ನು ಸಮುದ್ರ ಮಟ್ಟದಿಂದ ಸರಾಸರಿ 3000 ಮೀಟರ್ ಎತ್ತರದಲ್ಲಿದೆ. ಈ ಸುರಂಗಮಾರ್ಗವು ಮನಾಲಿ ಮತ್ತು ಲೆಹ್ ನಡುವಿನ ಅಂತರವನ್ನು 46 ಕಿ.ಮೀ. ತಗ್ಗಿಸಲಿದ್ದು, 4ರಿಂದ 5 ಗಂಟೆಗಳ ಸಮಯ ಉಳಿಸಲಿದೆ.