ಕರ್ನಾಟಕ

karnataka

ETV Bharat / business

6 ತಿಂಗಳಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗೆ 95,700 ಕೋಟಿ ರೂ. ವಂಚನೆ..!

ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) ಪ್ರಕಾರ ಸಾರ್ವಜನಿಕ ವಲಯದ ಬ್ಯಾಂಕ್​ (ಪಿಎಸ್‌ಬಿ) ವರದಿ ಮಾಡಿದಂತೆ 2019ರ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ 5,743 ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಂದ ಒಟ್ಟು 95,760.49 ಕೋಟಿ ರೂ. ವಂಚನೆ ನಡೆದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಹೇಳಿದರು.

By

Published : Nov 19, 2019, 11:34 PM IST

Updated : Nov 23, 2019, 5:43 PM IST

ಸಂಗ್ರಹ ಚಿತ್ರ

ನವದೆಹಲಿ: ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೊದಲ 6 ತಿಂಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್​ಗಳಿಗೆ ಒಟ್ಟು 95,700 ಕೋಟಿ ರೂ. ವಂಚನೆಯಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) ಪ್ರಕಾರ ಸಾರ್ವಜನಿಕ ವಲಯದ ಬ್ಯಾಂಕ್​ (ಪಿಎಸ್‌ಬಿ) ವರದಿ ಮಾಡಿದಂತೆ, 2019ರ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ 5,743 ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಂದ ಒಟ್ಟು 95,760.49 ಕೋಟಿ ರೂ. ವಂಚನೆ ನಡೆದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಹೇಳಿದರು.

ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಅವರು, 3.38 ಲಕ್ಷ ನಿಷ್ಕ್ರಿಯ ಕಂಪನಿಗಳ ಬ್ಯಾಂಕ್ ಖಾತೆಗಳನ್ನು ಗುರುತಿಸಲಾಗಿದೆ. ಬ್ಯಾಂಕ್​ಗಳಲ್ಲಿನ ವಂಚನೆ ಪ್ರಕರಣಗಳನ್ನು ತಡೆಯಲು ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್‌ ಅವರು, ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್​ನ (ಪಿಎಂಸಿ) ಗ್ರಾಹಕರಿಗೆ ನಗದು ವಾಪಸಾತಿ ಮಿತಿಯನ್ನು 50,000 ರೂ.ಗೆ ಹೆಚ್ಚಿಸಲಾಗಿದೆ. ಇದರಿಂದ ಬ್ಯಾಂಕ್​ನ ಶೇ. 78ರಷ್ಟು ಠೇವಣಿದಾರರು ತಮ್ಮ ಹಣ ತೆಗೆದುಕೊಳ್ಳಲು ನೆರವಾಗಲಿದೆ ಎಂದರು.

Last Updated : Nov 23, 2019, 5:43 PM IST

ABOUT THE AUTHOR

...view details