ನವದೆಹಲಿ: ಆಡಳಿತಾರೂಢ ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆಕೊಟ್ಟಿದ್ದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಬದಲಾವಣೆ ಆಗಿದೆ.
ಕೃಷಿ ಕಾಯ್ದೆ ವಿರೋಧಿಸಿ ರಾಹುಲ್ ಗಾಂಧಿ ಕರೆಕೊಟ್ಟ 'ಟ್ರ್ಯಾಕ್ಟರ್ ರ‍್ಯಾಲಿ'ಯಲ್ಲಿ ಬದಲಾವಣೆ - ಕೃಷಿ ಮಸೂದೆ
ಕೇಂದ್ರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್ ಮತ್ತು ಹರಿಯಾಣದಲ್ಲಿ ಅಕ್ಟೋಬರ್ 3ರಿಂದ 5ರವರೆಗೆ ಟ್ರ್ಯಾಕ್ಟರ್ ರ‌್ಯಾಲಿ ನಡೆಸಲು ನಿರ್ಧರಿಸಲಾಗಿತ್ತು. ಈಗ ಈ ಪ್ರತಿಭಟನೆಯನ್ನು ಅಕ್ಟೋಬರ್ 4ರಿಂದ 6ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ರಾಹುಲ್ ಗಾಂಧಿ ಅವರು ಅಕ್ಟೋಬರ್ 4ರಿಂದ 6ರ ವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಟ್ರ್ಯಾಕ್ಟರ್ ನಡೆಸಲು ಕರೆಕೊಟ್ಟಿದ್ದರು. ಈಗ ಈ ಪ್ರತಿಭಟನೆಯನ್ನು ಅಕ್ಟೋಬರ್ 4, 5, 6ಕ್ಕೆ ಮರು ನಿಗದಿಪಡಿಸಲಾಗಿದೆ. ಉಳಿದ ವಿವರಗಳು ಒಂದೇ ಆಗಿರುತ್ತವೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಟ್ವೀಟ್ ಮಾಡಿದ್ದಾರೆ.