ಮುಂಬೈ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಗುರುವಾರ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
ಆರ್‌ಬಿಐ ಗವರ್ನರ್ ವಿಡಿಯೋ ಕಾನ್ಫರೆನ್ಸ್ ಮೂಲಕ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳ (ಸಿಆರ್‌ಎ) ಮುಖ್ಯ ಅಧಿಕಾರಿಗಳ ಜತೆ ಸಂವಾದ ನಡೆಸಿದರು. ಸ್ಥೂಲ ಆರ್ಥಿಕ ಪರಿಸ್ಥಿತಿಯ ಮೌಲ್ಯಮಾಪನ ಮತ್ತು ಹಣಕಾಸು ವಲಯ ಸೇರಿದಂತೆ ವಿವಿಧ ಕೈಗಾರಿಕೆಗಳ ಬಗ್ಗೆ ತಮ್ಮ ದೃಷ್ಟಿಕೋನ ತಿಳಿಸುವಂತೆ ಕೋರಿದ್ದಾರೆ ಎಂದು ಕೇಂದ್ರ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.