ನವದೆಹಲಿ:ಯೆಸ್ ಬ್ಯಾಂಕ್‌ನ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣ ಆರ್‌ಬಿಐ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ, ಯೆಸ್ ಬ್ಯಾಂಕ್ ಲಿಮಿಟೆಡ್‌ನ ನಿರ್ದೇಶಕರ ಮಂಡಳಿಯನ್ನು 30 ದಿನಗಳ ವರೆಗೆ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಆರ್ಬಿಐನಿಂದ YES ಬ್ಯಾಂಕ್ ಸೂಪರ್ ಸೀಡ್: ಹಣ ಬಿಡಿಸಿಕೊಳ್ಳಲು ಗ್ರಾಹಕರಿಗೆ 50 ಸಾವಿರ ಮಿತಿ
ಬ್ಯಾಂಕಿನ ಆರ್ಥಿಕ ಸ್ಥಿತಿಯಲ್ಲಿ ಗಂಭೀರ ಕುಸಿತದಿಂದಾಗಿ ಯೆಸ್ ಬ್ಯಾಂಕ್ ಲಿಮಿಟೆಡ್‌ನ ನಿರ್ದೇಶಕರ ಮಂಡಳಿಯನ್ನು 30 ದಿನಗಳವರೆಗೆ ಆರ್‌ಬಿಐ ತನ್ನ ವಶಕ್ಕೆ ಪಡೆದುಕೊಂಡಿದೆ.
'ಬ್ಯಾಂಕಿನ ಆರ್ಥಿಕ ಸ್ಥಿತಿಯಲ್ಲಿ ಗಂಭೀರ ಕುಸಿತದಿಂದಾಗಿ' ಬ್ಯಾಂಕಿನ ಆಡಳಿತ ಮಂಡಳಿಯನ್ನು 30 ದಿನಗಳ ಅವಧಿಗೆ ರದ್ದುಪಡಿಸಲಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ಎಸ್‌ಬಿಐನ ಮಾಜಿ ಸಿಎಫ್‌ಒ ಪ್ರಶಾಂತ್ ಕುಮಾರ್ ಅವರನ್ನು ಯೆಸ್ ಬ್ಯಾಂಕ್‌ನ ನಿರ್ವಾಹಕರಾಗಿ ನೇಮಿಸಲಾಗಿದೆ ಎಂದು ತಿಳಿಸಿದೆ.
'ಬ್ಯಾಂಕಿನ ಠೇವಣಿದಾರರ ವಿಶ್ವಾಸವನ್ನು ತ್ವರಿತವಾಗಿ ಮರುಸ್ಥಾಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಅಲ್ಲದೆ ಠೇವಣಿದಾರರಿಗೆ 50 ಸಾವಿರ ರೂಪಾಯಿ ಹಣ ಡ್ರಾ ಮಾಡಿಕೊಳ್ಳಲು ಮಿತಿ ವಿಧಿಸಲಾಗಿದೆ. ವೈದ್ಯಕೀಯ ತುರ್ತುಸ್ಥಿತಿ, ಉನ್ನತ ಶಿಕ್ಷಣ, ಮದುವೆ ಮತ್ತು ಅನಿವಾರ್ಯ ತುರ್ತು ಪರಿಸ್ಥಿತಿಯಂತ ಕಾರಣಗಳಿಗೆ ವಿನಾಯಿತಿ ನೀಡಲಾಗಿದೆ.