ನವದೆಹಲಿ:ವಿವಿಧ ಸಹಕಾರಿ ಬ್ಯಾಂಕ್ಗಳಲ್ಲಿ ಠೇವಣಿ ಇಡುವ ಗ್ರಾಹಕರ ಹಿತ ರಕ್ಷಣೆ ಉದ್ದೇಶದಿಂದ ಸಹಕಾರ ಬ್ಯಾಂಕ್ಗಳನ್ನ ಭಾರತೀಯ ರಿಜರ್ವ್ ಬ್ಯಾಂಕ್ ಮೇಲ್ವಿಚಾರಣೆಗೆ ತರುವ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 2020 ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.
ಕೆಲವೊಂದು ಸಹಕಾರಿ ಬ್ಯಾಂಕ್ ಮತ್ತು ವಾಣಿಜ್ಯ ಬ್ಯಾಂಕ್ಗಳ ಸ್ಥಿತಿ ಹದಗೆಟ್ಟಿರುವ ಕಾರಣ ಅವುಗಳನ್ನ ಬ್ಯಾಂಕಿಂಗ್ ನಿಯಂತ್ರಣ(ತಿದ್ದುಪಡಿ) ಮಸೂದೆ ಮೂಲಕ ಆರ್ಬಿಐ ಮೇಲ್ವಿಚಾರಣೆಗೆ ತರಲು ಉದ್ದೇಶಿಸಲಾಗಿದೆ. ಠೇವಣಿದಾರರು ಇಡುವ ಹಣಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಕಳೆದ ಬುಧವಾರ ಈ ವಿಧೇಯಕ ಮಂಡಿಸಿದ್ದರು.