ನವದೆಹಲಿ: ತನ್ನ ತೀರ್ಪು ಜಾರಿಗೆ ತರಲು ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಇನ್ನೂ ಒಂದು ತಿಂಗಳು ಕಾಲಾವಕಾಶ ನೀಡಿದ್ದು, ಭಾರತೀಯ ಸೇನೆಯ ಎಲ್ಲ ಮಹಿಳಾ ಅಧಿಕಾರಿಗಳಿಗೆ ಸೀಮಿತ ಅವಧಿಯ ಶಾಶ್ವತ ಆಯೋಗ ನೀಡುವಂತೆ ಸೂಚಿಸಿದೆ.
ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರವು ತನ್ನ ತೀರ್ಪಿನಲ್ಲಿ ನೀಡಿರುವ ಎಲ್ಲ ನಿರ್ದೇಶನಗಳನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ತೀರ್ಪಿನ ಅನುಷ್ಠಾನಕ್ಕೆ ಆರು ತಿಂಗಳ ಕಾಲಾವಕಾಶ ಕೋರಿ ಕೇಂದ್ರವು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸುಪ್ರೀಂಕೋರ್ಟ್ ಈ ನಿರ್ದೇಶನ ನೀಡಿದೆ.