ನವದೆಹಲಿ: ದೇಶ ಬಿಟ್ಟು ಪರಾರಿ ಆಗಿರುವ ಮದ್ಯದ ಉದ್ಯಮಿ ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕರಣ ಮುಗಿದಿದೆ. ಆದರೆ, ಇಂಗ್ಲೆಂಡ್ನಲ್ಲಿ ಕೆಲವು ರಹಸ್ಯ ವಿಚಾರಣೆಗಳು ನಡೆಯುತ್ತಿವೆ. ಭಾರತಕ್ಕೆ ಅವರನ್ನು ಹಸ್ತಾಂತರಿಸಲು ಅಲ್ಲಿನ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿತು.
ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ನ್ಯಾಯಪೀಠದ ಮುಂದೆ ವಾದಿಸಿದರು.
ಗೌಪ್ಯ ವಿಚಾರಣೆಯ ಸ್ವರೂಪದ ಬಗ್ಗೆ ಸರ್ಕಾರಕ್ಕೆ ಏನು ತಿಳಿದಿಲ್ಲ. ಮಲ್ಯರನ್ನು ಹಸ್ತಾಂತರಿಸಲು ಇಂಗ್ಲೆಂಡ್ನ ಉನ್ನತ್ತ ನ್ಯಾಯಾಲಯ ಆದೇಶಿಸಿದೆ. ಆದರೆ ಅದು ಇನ್ನೂ ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರದ ಪರ ವಕೀಲರು ಹೇಳಿದ್ದಾರೆ.
ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪದ ಮೇಲೆ ಭಾರತಕ್ಕೆ ಹಸ್ತಾಂತರಿಸುವ ಆದೇಶವನ್ನು ಪ್ರಶ್ನಿಸಿ ಮೇ ತಿಂಗಳಲ್ಲಿ ಇಂಗ್ಲೆಂಡ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಅರ್ಜಿಯನ್ನು ಲಂಡನ್ ಹೈಕೋರ್ಟ್ ವಜಾಗೊಳಿಸಿತ್ತು.