ನವದೆಹಲಿ: ಗರಿಷ್ಠ ಮುಖಬೆಲೆಯ ನೋಟು ನಿಷೇಧದ ನಂತರ ತೆರಿಗೆ ರಿಟರ್ನ್ಸ್ ಸಲ್ಲಿಸುವವರು ಪ್ರಮಾಣ ಹೆಚ್ಚಳವಾಗುತ್ತಿದ್ದು, ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳುವವರ ಸಂಖ್ಯೆ ಇಳಿಕಮುಖವಾಗಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ.
2016ರ ನವೆಂಬರ್ 6ರಂದು 500 ಹಾಗೂ 1000 ರೂ. ಮುಖ ಬೆಲೆಯ ನೋಟು ಚಲಾವಣೆ ಅಮಾನ್ಯಗೊಳಿಸಿದ ಬಳಿಕ ತೆರಿಗೆ ಪಾವತಿದದರ ಸಂಖ್ಯೆ ಹೆಚ್ಚಳವಾಗಿದೆ. ಆರಂಭಿಕ ದಿನಗಳಲ್ಲಿ ನೋಟು ನಿಷೇಧದ ಪರಿಣಾಮಗಳೇನು ಎಂಬುದು ಭವಿಷ್ಯದಲ್ಲಿ ಗೊತ್ತಾಗಲಿದೆ ಎಂದು ಹೇಳಲಾಗಿತ್ತು. ಅದರ ಪರಿಣಾಮ ಈಗ ಕಾಣುತ್ತಿವೆ.