ಉಕ್ರೇನ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರಿಸಿದ್ದು, ಉಕ್ರೇನ್ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾ ನಡೆ ವಿರುದ್ಧ ಈಗಾಗಲೇ ಅನೇಕ ರಾಷ್ರಗಳು ತಮ್ಮ ವಿರೋಧ ವ್ಯಕ್ತಪಡಿಸಿವೆ. ರಷ್ಯಾ ವಿರುದ್ಧ ಅನೇಕ ದೇಶಗಳು ಆರ್ಥಿಕ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಗಣನೀಯ ಏರಿಕೆ ಕಂಡಿದೆ.
ಹೌದು, ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್ಗೆ 119.84 ಡಾಲರ್ಗೆ ತಲುಪಿದೆ. ಉಕ್ರೇನ್ ಮೇಲಿನ ರಷ್ಯಾ ಆಕ್ರಮಣ ಆರ್ಥಿಕ ಕ್ಷೇತ್ರದ ಮೇಲೆ ಭಾರಿ ಪರಿಣಾಮ ಬೀರಿದ್ದು, ಕಳೆದ 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆಯು ಗುರುವಾರದಂದು ಪ್ರತಿ ಬ್ಯಾರೆಲ್‌ಗೆ ಶೇ. 4ರಷ್ಟು ಅಂದರೆ ಪ್ರತಿ ಬ್ಯಾರಲ್ಗೆ 119.84 ಡಾಲರ್‌ನಷ್ಟು ಏರಿಕೆಯಾಗಿದೆ.
ರಷ್ಯಾ-ಉಕ್ರೇನ್ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ಮಟ್ಟದ ಹೆಚ್ಚಳವು ಭಾರತದ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ 22 ರೂ. ಹೆಚ್ಚಿಸುವ ನಿರೀಕ್ಷೆಯಿದೆ.