ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ 11 ಗಂಟೆಗೆ 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಇದಕ್ಕೂ ಮುನ್ನ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ.
ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿ ಭವನಕ್ಕೆ ಬಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಸಚಿವೆ ಸೀತಾರಾಮನ್ ಮಾತುಕತೆ ನಡೆಸಿದರು. ರಾಷ್ಟ್ರಪತಿ ಭವನಕ್ಕೆ ತೆರಳಲು ಸಚಿವಾಲಯದಿಂದ ಅಧಿಕಾರಿಗಳೊಂದಿಗೆ ಹೊರ ಬಂದ ಸಚಿವರು ಬಜೆಟ್ ಪ್ರತಿ ಪ್ರದರ್ಶಿಸಿದರು. ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಸಚಿವರು ಸಂಸತ್ ಆಗಮಿಸಿದ್ದಾರೆ. ಈ ವೇಳೆ ಬಜೆಟ್‌ಗೆ ಅನುಮೋದನೆ ಪಡೆಯಲಿದ್ದಾರೆ.
ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿಗಳು ಹಾಗೂ ಹಣಕಾಸು ಸಚಿವರ ತಂಡ ಬಜೆಟ್‌ಗೆ ಸಚಿವ ಸಂಪುಟ ಅನುಮೋದನೆ
ಬಜೆಟ್ ಮಂಡನೆಗೆ ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಬಜೆಟ್‌ಗೆ ಅನುಮೋದನೆ ನೀಡಲಾಗಿದೆ. ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಪ್ರಹ್ಲಾದ್ ಜೋಶಿ, ಅಶ್ವಿನಿ ವೈಷ್ಣವ್ ಸೇರಿದಂತೆ ಹಿರಿಯ ಸಚಿವರು ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ