ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಡೀಸೆಲ್ ಬೆಲೆ 84 ರೂ., ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ 100 ರೂ. ಇದೆ.
ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ದರ ಪಟ್ಟಿಯ ಪ್ರಕಾರ, ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 17 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 29 ಪೈಸೆ ಹೆಚ್ಚಿಸಲಾಗಿದೆ.
ಈ ತಿಂಗಳು 12ನೇ ತಾರೀಖಿನಂದು ತೈಲ ಬೆಲೆಯಲ್ಲಾದ ಏರಿಕೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಳ್ಳಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ 93.21 ರೂ. ಮತ್ತು ಡೀಸೆಲ್ 84.07 ರೂ.ಗೆ ಏರಿದೆ.
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ದರಗಳು ಈಗಾಗಲೇ 100 ರೂ.ಗಳನ್ನು ದಾಟಿದ್ದವು.
ಮುಂಬೈನಲ್ಲಿ ಈಗ ಒಂದು ಲೀಟರ್ ಪೆಟ್ರೋಲ್ 99.49 ರೂ.ಗಳಿಗೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 91.30 ರೂ. ಇದೆ. ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತದೆ. ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿವೆ.
ಹಿಂದಿನ 15 ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಂಚ್‌ಮಾರ್ಕ್ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.
ರಾಜಸ್ಥಾನದ ಶ್ರೀ ಗಂಗನಗರ ಜಿಲ್ಲೆಯು ದೇಶದಲ್ಲಿ ಅತಿ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪ್ರತಿ ಲೀಟರ್‌ಗೆ 104.18 ಮತ್ತು ಲೀಟರ್‌ಗೆ 96.91 ರೂ. ಇದೆ.