ನವದೆಹಲಿ:ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿರುವ ಪರಿಣಾಮ ಪ್ರತಿ ಲೀಟರ್ ತೈಲ ಬೆಲೆಯಲ್ಲಿ ಇದೀಗ ಮತ್ತಷ್ಟು ಇಳಿಕೆ ಕಂಡು ಬಂದಿದೆ.
ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತಷ್ಟು ಅಗ್ಗ... ಆರು ತಿಂಗಳಲ್ಲಿ 2ನೇ ಸಲ ಇಳಿಕೆ! - ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತಷ್ಟು ಇಳಿಕೆ ಕಂಡು ಬಂದಿರುವ ಕಾರಣ ಇದೀಗ ತೈಲ ಬೆಲೆಯಲ್ಲಿ ಕೊಚ್ಚ ಮಟ್ಟದ ಇಳಿಕೆಯಾಗಿದೆ .
ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 13 ಪೈಸೆ ಹಾಗೂ ಡೀಸೆಲ್ ಬೆಲೆ 12 ಪೈಸೆ ಇಳಿಕೆಯಾಗಿದೆ. ಸದ್ಯ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 81.86 ಪೈಸೆ ಹಾಗೂ ಡೀಸೆಲ್ ಬೆಲೆ 73.05 ರೂ ಆಗಿದೆ. ಈ ಹಿಂದೆ ಸೆಪ್ಟೆಂಬರ್ 3ರಂದು ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿತು.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಎರಡನೇ ಸಲ ಸ್ವಲ್ಪ ಮಟ್ಟದ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಸದ್ಯ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 84.52 ಪೈಸೆ ಹಾಗೂ ಡೀಸೆಲ್ ದರ 77.22 ಪೈಸೆ ಆಗಿದೆ.