ನವದೆಹಲಿ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ರಾಜಕೀಯ ಬಿಕ್ಕಟ್ಟು ಜಾಗತಿಕ ಮಟ್ಟದಲ್ಲಿ ತೈಲ ದರ ಏರಿಕೆಗೆ ಕಾರಣವಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ.
ಮಧ್ಯಪ್ರಾಚ್ಯದಲ್ಲಿ ರಾಜಕೀಯ ಬಿಕ್ಕಟ್ಟು.. ಭಾರತೀಯ ಗ್ರಾಹಕರಿಗೆ ಪೆಟ್ರೋಲ್ ಏರಿಕೆಯ ತಲೆಬೇನೆ.. - ಪೆಟ್ರೋಲ್ ದರ
ಭಾರತದ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 10-11 ಪೈಸೆ ಹಾಗೂ 15-16 ಪೈಸೆಯಷ್ಟು ಹೆಚ್ಚಳವಾಗಿದೆ.
ಪೆಟ್ರೋಲ್
ಭಾರತದ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 10-11 ಪೈಸೆ ಹಾಗೂ 15-16 ಪೈಸೆಯಷ್ಟು ಹೆಚ್ಚಳವಾಗಿದೆ. ಇಂಡಿಯನ್ ಆಯಿಲ್ ವೆಬ್ಸೈಟ್ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದೆಹಲಿ,ಮುಂಬೈ, ಕೋಲ್ಕತ್ತಾ ಹಾಗೂ ಚೆನ್ನೈನಲ್ಲಿ ಕ್ರಮವಾಗಿ ₹ 75.45 & ₹ 68.40, ₹ 81.04 & ₹ 71.72, ₹ 78.04 & 70.76 ಹಾಗೂ ₹ 78.39 & ₹ 72.28 ಮಾರಾಟ ಆಗುತ್ತಿದೆ.