ನವದೆಹಲಿ:ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ದೆಹಲಿಯಲ್ಲಿ ರಸಗೊಬ್ಬರ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಯೂರಿಯಾ ಹೊರತಾದ ವಿವಿಧ ನಮೂನೆಯ ಪೋಷಕಾಂಶಯುಕ್ತ ರಸಗೊಬ್ಬರ ಬೆಲೆಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಈ ಸಭೆ ಕರೆದಿದ್ದು ಮಹತ್ವದ ಬೆಳವಣಿಗೆಯಾಗಿತ್ತು.
ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ಬಹುತೇಕವಾಗಿ ಭಾರತ ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಉತ್ಪಾದನಾ ವೆಚ್ಚವೂ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್ಲ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಿಸಿವೆ. ಆದಾಗ್ಯೂ, ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿಗಳು ಹಾಗೂ ಆಮದುದಾರರ ಮನವೊಲಿಸಲು ಕೇಂದ್ರ ಸರ್ಕಾರ ತೀವ್ರ ಪ್ರಯತ್ನ ನಡೆಸಿದೆ.