ನವದೆಹಲಿ:ಲೋಕಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲ, ವಿರೋಧದ ಮಧ್ಯೆಯೂ ಕೇಂದ್ರ ಸರ್ಕಾರ ಇಂಡಸ್ಟ್ರಿಯಲ್ ರಿಲೇಷನ್ಸ್ ಮಸೂದೆ 2019 ಮಂಡಿಸಿದೆ.
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆ ಇಂಡಸ್ಟ್ರಿಯಲ್ ರಿಲೇಷನ್ಸ್ ಬಿಲ್ ಪಾಸ್..! ಅಂತಹದೇನಿದೆ ಇದರಲ್ಲಿ? - ಇಂಡಸ್ಟ್ರಿ ರಿಲೇಷನ್ ಮಸೂದೆ ಮಂಡನೆ
ಕಾರ್ಮಿಕ ಸಚಿವರು ಇಂಡಸ್ಟ್ರಿ ರಿಲೇಷನ್ ಮಸೂದೆ ಮಂಡಿಸುತ್ತಿದಂತೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸದಸ್ಯರು, ಇದೊಂದು ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದು ಆಡಳಿತ ಪಕ್ಷದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟವು ನವೆಂಬರ್ 20ರಂದು ಅನುಮೋದನೆ ನೀಡಿತ್ತು. ಇದರಲ್ಲಿ ಮೂರು ಪ್ರಮುಖ ಕಾರ್ಮಿಕ ಕಾನೂನುಗಳನ್ನು ಸರಳಗೊಳಿಸಿ ಸೇರಿಸಲಾಗಿದೆ.
![ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆ ಇಂಡಸ್ಟ್ರಿಯಲ್ ರಿಲೇಷನ್ಸ್ ಬಿಲ್ ಪಾಸ್..! ಅಂತಹದೇನಿದೆ ಇದರಲ್ಲಿ? Lok Sabha](https://etvbharatimages.akamaized.net/etvbharat/prod-images/768-512-5203139-thumbnail-3x2-bil.jpg)
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ ಅವರು ಲೋಕಸಭೆಯಲ್ಲಿ ಈ ಮಸೂದೆ ಮಂಡಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರ ಹಕ್ಕುಗಳಿಗೆ ವಿರುದ್ಧವಾಗಿರುವ ಯಾವುದೇ ಅಂಶಗಳು ಬಿಲ್ನಲ್ಲಿ ಸೇರಿಸಿಲ್ಲ. ಈ ಮಸೂದೆಯು ಕಾರ್ಮಿಕ ಸುಧಾರಣಾ ಯೋಜನೆಗಳಿಗೆ ಸಂಬಂಧಿಸಿದ್ದಾಗಿದೆ. ಈ ಹಿಂದಿನ 44 ಕಾನೂನುಗಳನ್ನು ಒಗ್ಗೂಡಿಸಿ ಒಟ್ಟು ನಾಲ್ಕು ನೀತಿಗಳಲ್ಲಿ ಜಾರಿಗೆ ತರಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಕಾರ್ಮಿಕ ಸಚಿವರು ಈ ಮಸೂದೆ ಮಂಡಿಸುತ್ತಿದಂತೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸದಸ್ಯರು, ಇದೊಂದು ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದು ಆಡಳಿತ ಪಕ್ಷದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟವು ನವೆಂಬರ್ 20ರಂದು ಅನುಮೋದನೆ ನೀಡಿತ್ತು. ಇದರಲ್ಲಿ ಮೂರು ಪ್ರಮುಖ ಕಾರ್ಮಿಕ ಕಾನೂನುಗಳನ್ನು ಸರಳಗೊಳಿಸಿ ಸೇರಿಸಲಾಗಿದೆ.