ಕರ್ನಾಟಕ

karnataka

ETV Bharat / business

ಕೋವಿಡ್ ನಿಯಮದೊಂದಿಗೆ ಗಣೇಶ ಹಬ್ಬ ಆಚರಣೆಗೆ ಸಿಎಂ ಅನುಮತಿ ನೀಡಬಹುದು: ಸಚಿವೆ ಜೊಲ್ಲೆ

ನಗರದ ಅದೃಷ್ಟ ಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಕೊರೊನಾ ವಾರಿಯರ್ಸ್​ಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Minister shashikala jolle
Minister shashikala jolle

By

Published : Sep 1, 2021, 11:58 PM IST

Updated : Sep 2, 2021, 12:52 AM IST

ವಿಜಯಪುರ:ಕೋವಿಡ್​ ನಿಯಮ‌ ಪಾಲನೆ ಮಾಡಿ ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಮುಖ್ಯಮಂತ್ರಿ ಘೋಷಣೆ ಮಾಡಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್​​ನಿಂದ ಗಣೇಶ ಹಬ್ಬಕ್ಕೆ ತೊಂದರೆ ಆಗಬಾರದು ಎಂಬ ವಿಚಾರ ಸರ್ಕಾರದ ಗಮನಕ್ಕಿದೆ. ಹಾಗಾಗಿ ಕೋವಿಡ್ ನಿಯಮ‌ ಪಾಲನೆ ಮಾಡಿ ಗಣೇಶ ಉತ್ಸವ ಆಚರಣೆ ಮಾಡುವಂತೆ ನಾನು ಸಹ ವಿನಂತಿಸುತ್ತೇನೆ ಎಂದರು.

ಕ್ಯಾನ್ಸರ್ ಪೀಡಿತ ಮಹಿಳೆಗೆ 1 ಲಕ್ಷ ರೂ. ಸಹಾಯ ಧನ ನೀಡಿದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ

ಸಿಂದಗಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಆರೋಪಿ ಮೇಲೆ ಪೋಕ್ಸೊ ಕಾಯ್ದೆಯಲ್ಲಿ ಕೇಸ್ ದಾಖಲಾಗಿತ್ತು. ಆ ಪ್ರಕರಣದಲ್ಲಿ ಐವರನ್ನು ಅಮಾನತು ಮಾಡಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು. ಎಸ್​ಪಿ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಕ್ಯಾನ್ಸರ್​ ಪೀಡಿತ ಮುಸ್ಲಿಂ ಮಹಿಳೆಗೆ 1 ಲಕ್ಷ ರೂ ಸಹಾಯಧನ

ಮುಸ್ಲಿಂ ಮಹಿಳೆಯರಿಗೆ ಕ್ಯಾನ್ಸರ್ ಚಿಕಿತ್ಸೆಗಾಗಿ ಒಂದು ಲಕ್ಷ ರೂಪಾಯಿ ಸಹಾಯ ಧನ‌ ನೀಡಿರುವ ವಿಚಾರವಾಗಿ ಎಲ್ಲರೂ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಹಜ್ ಮತ್ತು ವಕ್ಫ್ ಇಲಾಖೆಯಲ್ಲಿ 2009ರಲ್ಲಿ ಈ ಆದೇಶ‌ ಜಾರಿಯಾಗಿದೆ. ಅಂದು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರೆ ಅವರಿಗೆ ಒಂದು ಲಕ್ಷ ರೂಪಾಯಿ ನೀಡಲು ತೀರ್ಮಾನಿಸಲಾಗಿತ್ತು ಅದು ಇಲ್ಲಿವರೆಗೂ ಯಾರಿಗೂ ಗೊತ್ತಿರಲಿಲ್ಲ. ನಾನು ಕೇವಲ ಆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದೇನೆ. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ‌ ಬಳಿಕ ನನ್ನ ಇಲಾಖೆ ಬಗ್ಗೆ ಮಾಹಿತಿ ನೀಡುವಾಗ ಅದರ ಬಗ್ಗೆ ಹೇಳಿದ್ದೇನೆ. ಅದು ನಾನು ಘೋಷಣೆ ಮಾಡಿದ ಯೋಜನೆ ಅಲ್ಲ ಎಂದು ತಿಳಿಸಿದರು.

ನಮಗೆ ಮುಸ್ಲಿಂ-ಹಿಂದೂ ಎಂಬ ಭೇದ-ಭಾವ ಇಲ್ಲ. ಸಿಎಂ ಪರಿಹಾರ ನಿಧಿ ಹಾಗೂ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಎಲ್ಲರಿಗೂ ಪರಿಹಾರ ನೀಡಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳಿಗೂ ಹಲವು ಯೋಜನೆಗಳ ಮೂಲಕ ಪರಿಹಾರ ನೀಡಲಾಗುತ್ತಿದೆ ಎಂದರು.

Last Updated : Sep 2, 2021, 12:52 AM IST

ABOUT THE AUTHOR

...view details