ನವದೆಹಲಿ:ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳಿಂದ ಜನಸಾಮಾನ್ಯರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಹಣಕಾಸು ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ಗಳ ಬೆಲೆಯನ್ನು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಇಳಿಸಿವೆ.
ಫೆಬ್ರವರಿ 1ರಿಂದ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ. ಅಂದರೆ, ದೆಹಲಿಯಲ್ಲಿ 19ಕೆಜಿ ಸಿಲಿಂಡರ್ನ ಬೆಲೆ 1907 ರೂಪಾಯ ಆಗಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.