ನವದೆಹಲಿ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿನ ಅನಿಶ್ಚತತೆಯ ಪರಿಣಾಮ ದೇಶಿ ಇಂಧನ ಚಿಲ್ಲರೆ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಕಂಡು ಬಂದಿದೆ.
ರಾಷ್ಟ್ರರಾಜಧಾನಿ ದೆಹಲಿ, ಕೋಲ್ಕತಾ ಮತ್ತು ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಮೇಲೆ ಐದು ಪೈಸೆಯಷ್ಟು ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ನಾಲ್ಕು ಪೈಸೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನದಿಂದ ಸ್ಥಿರವಾಗಿದ್ದ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಕಂಡು ಬಂದಿದೆ. ದೆಹಲಿ ಮತ್ತು ಕೋಲ್ಕತಾದಲ್ಲಿ 5 ಪೈಸೆ ಏರಿಕೆ ಆಗಿದ್ದರೇ ಮುಂಬೈ ಹಾಗೂ ಚೆನ್ನೈನಲ್ಲಿ 6 ಪೈಸೆ ಹೆಚ್ಚಳವಾಗಿದೆ.