ಕರ್ನಾಟಕ

karnataka

ETV Bharat / business

ವಾಹನ ಸವಾರರ ಜೇಬು ಸುಡುತ್ತಿದೆ ತೈಲ ಬೆಲೆ: ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಏರಿಕೆ..ಬೆಂಗಳೂರಿನಲ್ಲಿ ಎಷ್ಟಿದೆ? - ಪೆಟ್ರೋಲ್‌ ಬೆಲೆ ಏರಿಕೆ

ತೈಲ ಕಂಪನಿಗಳು ಮತ್ತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಪ್ರತಿ ಲೀಟರ್‌ ಮೇಲೆ ತಲಾ 35 ಪೈಸೆ ಏರಿಸಿ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಶಾಕ್‌ ನೀಡಿವೆ. ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮೆಟ್ರೋ ನಗರಗಳ ತೈಲ ಬೆಲೆಯ ಮಾಹಿತಿ ಇಲ್ಲಿದೆ.

Price of petrol & diesel in #Delhi is at Rs 107.24 per litre  & Rs 95.97 per litre respectively today
ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ; ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ 35 ಪೈಸೆ ಏರಿಕೆ

By

Published : Oct 23, 2021, 9:28 AM IST

Updated : Oct 23, 2021, 5:35 PM IST

ನವದೆಹಲಿ: ದೇಶದಲ್ಲಿ ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದ್ದು, ಲೀಟರ್‌ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ತಲಾ 35 ಪೈಸೆ ಏರಿಕೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌, ಡೀಸೆಲ್‌ ಕ್ರಮವಾಗಿ 106.89 ರೂ. ಹಾಗೂ 95.62 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಎಷ್ಟು?

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರ್​​ಗೆ 110.61 ರೂಪಾಯಿ ಇದ್ದರೆ, ಡೀಸೆಲ್‌ 101.49 ರೂಪಾಯಿಗೆ ಮಾರಾಟ ಆಗುತ್ತಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್‌ 112.44 ರೂ. ಡೀಸೆಲ್‌ 103.26 ರೂಪಾಯಿ ಇದೆ.

ಇಂದು ಸಹ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ!

ದೇಶದಲ್ಲಿ ಪೆಟ್ರೋಲ್ ದರಗಳನ್ನು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪರಿಷ್ಕರಿಸಲಾಗುತ್ತದೆ. ಜಾಗತಿಕ ತೈಲ ಬೆಲೆಯಲ್ಲಿ ಒಂದು ನಿಮಿಷದ ವ್ಯತ್ಯಾಸವಾದರೂ ಇಂಧನ ಬಳಕೆದಾರರು ಮತ್ತು ವಿತರಕರಿಗೆ ಇದು ಅನ್ವಯಿಸುತ್ತದೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಅನ್ನು ಒಳಗೊಂಡಿದೆ.

ವ್ಯಾಟ್ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ, ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆ ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನದ ಬೆಲೆಯ ಮೇಲೆ ಪ್ರಭಾವ ಬೀರುತ್ತವೆ. ಇವುಗಳಲ್ಲಿ ಯುಎಸ್ ಡಾಲರ್ ರೂಪಾಯಿ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ಸೂಚ್ಯಂಕಗಳು, ಇಂಧನದ ಬೇಡಿಕೆ ಇತ್ಯಾದಿಗಳು ಸೇರಿವೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಹೆಚ್ಚಾದಾಗ ಭಾರತದಲ್ಲಿ ಬೆಲೆಗಳು ಹೆಚ್ಚಾಗುತ್ತವೆ.

Last Updated : Oct 23, 2021, 5:35 PM IST

ABOUT THE AUTHOR

...view details