ಮುಂಬೈ :ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸಾರ್ವಜನಿಕರಿಗೆ ಹಳೆಯ ನೋಟುಗಳು ಮತ್ತು ನಾಣ್ಯಗಳನ್ನು ಖರೀದಿಸುವ ಅಥವಾ ಮಾರಾಟ ಮಾಡುವ ಆಫರ್‌ಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಕೇಂದ್ರೀಯ ಬ್ಯಾಂಕ್, ಭಾರತೀಯ ರಿಸರ್ವ್ ಬ್ಯಾಂಕಿನ ಹೆಸರು ಮತ್ತು ಲಾಂಛನವನ್ನು ಬಳಸಿಕೊಂಡು ಮೋಸ ಮಾಡುತ್ತಾರೆ ಎಂದು ಹೇಳಿದೆ.
ಆನ್‌ಲೈನ್ ಹಾಗೂ ಆಫ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸಾರ್ವಜನಿಕರಿಂದ ಶುಲ್ಕಗಳು, ಕಮಿಷನ್ ಮತ್ತು ತೆರಿಗೆ ಪಾವತಿ ಹೆಸರಿನಲ್ಲಿ ಹಳೆಯ ನೋಟುಗಳು ಮತ್ತು ನಾಣ್ಯಗಳ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ವಹಿವಾಟುಗಳಲ್ಲಿ ವಂಚನೆಗೆ ಒಳಗಾಗದಿರಿ ಎಂದು ಆರ್‌ಬಿಐ ಎಚ್ಚರಿಸಿದೆ.