ಕರ್ನಾಟಕ

karnataka

ETV Bharat / business

ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 150 ಪಾಯಿಂಟ್ ಏರಿಕೆ: ನಿಫ್ಟಿ 69.35 ಮುನ್ನಡೆ - ಇಕ್ವಿಟಿ ಬೆಂಚ್‌ಮಾರ್ಕ್ ಸೆನ್ಸೆಕ್ಸ್

ಇಕ್ವಿಟಿ ಬೆಂಚ್‌ಮಾರ್ಕ್ ಸೆನ್ಸೆಕ್ಸ್ ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಪಾಯಿಂಟ್‌ಗಳ ಏರಿಕೆ ಕಂಡಿದೆ. 30 ಷೇರುಗಳ ಬಿಎಸ್ಇ ಸೂಚ್ಯಂಕವು 207 ಪಾಯಿಂಟ್ ಅಥವಾ 0.42 ರಷ್ಟು ಹೆಚ್ಚಳವಾಗಿ 49,958.41 ಕ್ಕೆ ವಹಿವಾಟು ನಡೆಸುತ್ತಿದೆ.

Sensex
ಇಕ್ವಿಟಿ ಬೆಂಚ್‌ಮಾರ್ಕ್ ಸೆನ್ಸೆಕ್ಸ್

By

Published : Feb 24, 2021, 12:52 PM IST

ಮುಂಬೈ: ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿನ ಸಕಾರಾತ್ಮಕ ಪ್ರವೃತ್ತಿ ಮತ್ತು ನಿರಂತರ ವಿದೇಶಿ ನಿಧಿಯ ಒಳಹರಿವಿನ ಮಧ್ಯೆ, ಇಕ್ವಿಟಿ ಬೆಂಚ್‌ಮಾರ್ಕ್ ಸೆನ್ಸೆಕ್ಸ್ ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಪಾಯಿಂಟ್‌ಗಳ ಏರಿಕೆ ಕಂಡಿದೆ.

30 ಷೇರುಗಳ ಬಿಎಸ್ಇ ಸೂಚ್ಯಂಕವು 207 ಪಾಯಿಂಟ್ ಅಥವಾ 0.42 ರಷ್ಟು ಹೆಚ್ಚಳವಾಗಿ 49,958.41 ಕ್ಕೆ ವಹಿವಾಟು ನಡೆಸುತ್ತಿದೆ. ಅಂತೆಯೇ, ವಿಶಾಲವಾದ ಎನ್‌ಎಸ್‌ಇ ನಿಫ್ಟಿ 69.35 ಪಾಯಿಂಟ್‌ಗಳು ಅಥವಾ ಶೇ 0.47 ರಷ್ಟು ಮುನ್ನಡೆ ಸಾಧಿಸಿ 14,777.15 ಕ್ಕೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಸೆನ್ಸೆಕ್ಸ್ ಪ್ಯಾಕ್‌ನಲ್ಲಿ ಶೇ.2 ರಷ್ಟು ಏರಿಕೆ ಕಂಡಿದೆ. ಬಜಾಜ್ ಫೈನಾನ್ಸ್, ಎಸ್‌ಬಿಐ, ಒಎನ್‌ಜಿಸಿ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ನಂತರದ ಸ್ಥಾನದಲ್ಲಿದೆ. ಮತ್ತೊಂದೆಡೆ, ಟಿಸಿಎಸ್, ಪವರ್‌ಗ್ರಿಡ್, ಇನ್ಫೋಸಿಸ್, ಎಚ್‌ಯುಎಲ್ ಮತ್ತು ಟೆಕ್ ಮಹೀಂದ್ರಾ ಕುಸಿತ ಕಂಡಿವೆ.

ABOUT THE AUTHOR

...view details