ಬೆಂಗಳೂರು: ಭಾರತೀಯ ಉದ್ಯಮ ಕ್ಷೇತ್ರದ ಸಾಧಕರನ್ನು ಗುರುತಿಸಿ ವಿತರಿಸಲಾಗುವ ಪ್ರಶಸ್ತಿ 'ಪ್ರೈಡ್ ಇಂಡಿಯಾ ಅವಾರ್ಡ್’. ಇತ್ತೀಚೆಗೆ ಬೆಂಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರಿಯಾ ಸರಣ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.
"ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಕಾರ್ಯಕ್ರಮ ಅರ್ಥವತ್ತಾಗಿದೆ. ಸಣ್ಣದು, ದೊಡ್ಡದೆಂಬುದರಾಚೆಗೆ ಇಂಥ ಪ್ರಶಸ್ತಿಗಳು ಘನತೆಯ ಕಾರಣದಿಂದ ಮುಖ್ಯವಾಗುತ್ತವೆ. ಮುಂದೊಂದು ದಿನ ಪ್ರೈಡ್ ಇಂಡಿಯಾ ಅವಾರ್ಡ್ ಕಾರ್ಯಕ್ರಮ ಗ್ರೇಟ್ ಶೋ ಅನ್ನಿಸಿಕೊಳ್ಳಲಿದೆ" ಎಂದು ನಟಿ ಶ್ರಿಯಾ ಸರಣ್ ಪ್ರಶಸ್ತಿ ವಿತರಿಸಿ ಅಭಿಪ್ರಾಯಪಟ್ಟರು.
ಪ್ರೈಡ್ ಇಂಡಿಯಾ ಅವಾರ್ಡ್ ಪರಿಕಲ್ಪನೆ ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಕನಸಿನ ಕೂಸು. ಉದ್ಯಮ ವಲಯದಲ್ಲಿ ಹೊಸ ಸಾಹಸಗಳನ್ನು ಮಾಡಿ ಗೆದ್ದವರು ನಾನಾ ವಿಭಾಗದಲ್ಲಿದ್ದಾರೆ. ಅಂಥವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಾ ಭಾರತೀಯ ಉದ್ಯಮರಂಗ ಹೊಸ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರಣೆ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಂಘಟಕರು ಹೇಳಿದ್ದಾರೆ.