ಕರ್ನಾಟಕ

karnataka

ETV Bharat / business

ನಾವು ಏರ್​ಪೋರ್ಟ್​ಗಳ​ನ್ನು ಮಾರಾಟ ಮಾಡ್ತಿಲ್ಲ, ಗುತ್ತಿಗೆಗೆ ನೀಡುತ್ತಿದ್ದೇವೆ: ಸಚಿವ ಸಿಂಧಿಯಾ

ಛತ್ತೀಸ್​ಗಢದ ರಾಜನಂದಗಾಂವ್ ಪ್ರವಾಸದಲ್ಲಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದೇಶದಲ್ಲಿ ವಿಮಾನ ನಿಲ್ದಾಣಗಳನ್ನು ಮಾರಾಟ ಮಾಡುತ್ತಿಲ್ಲ. ಅದರ ಬದಲಿಗೆ ಗುತ್ತಿಗೆಗೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

target on CM Baghel For education PM housing scheme malnutrition  Jyotiraditya Scindia target on CM Baghel  Rajnandgaon visit Jyotiraditya Scindia target on CM Baghel  Union Civil Aviation Minister Jyotiraditya Scindia  Civil Aviation Minister Jyotiraditya Scindia  Jyotiraditya Scindia visit to Rajnandgaon  ಪ್ರಧಾನ ಮಂತ್ರಿ ಆವಾಸ್ ಯೋಜನೆ  ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ವಾಗ್ದಾಳಿ  ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಛತ್ತೀಸ್​ಗಢಕ್ಕೆ ಭೇಟಿ  ವಿಮಾನ ನಿಲ್ದಾಣಗಳನ್ನು ಗುತ್ತಿಗೆಗೆ ನೀಡುತ್ತಿದ್ದೇವೆ ಎಂದ ಕೇಂದ್ರ ಸಚಿವ
ಕೇಂದ್ರ ಸಚಿವ

By

Published : Apr 20, 2022, 8:14 AM IST

ರಾಜನಂದಗಾಂವ್(ಛತ್ತೀಸ್​ಗಢ):ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರಾಜನಂದಗಾಂವ್‌ಗೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಸಿಂಧಿಯಾ ಜೊತೆ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜನಂದಗಾಂವ್ ಸಂಸದ ಸಂತೋಷ್ ಪಾಂಡೆ ಮತ್ತು ಎಲ್ಲಾ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಕೇಂದ್ರ ಸಚಿವ ಸಿಂಧಿಯಾ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳು ಮತ್ತು ನೌಕರರಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದೇವೆ. ಸಭೆಯಲ್ಲಿ ಅಪೌಷ್ಟಿಕತೆ, ಅಭಿವೃದ್ಧಿ, ಶಿಕ್ಷಣ ಮತ್ತು ಉದ್ಯೋಗದ ವಿಷಯದ ಬಗ್ಗೆ ಚರ್ಚಿಸಲಾಗಿದೆ. ನಾವು ವಿಮಾನ ನಿಲ್ದಾಣಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಿಗೆ ಗುತ್ತಿಗೆ ನೀಡುತ್ತಿದ್ದೇವೆ ಎಂದು ಹೇಳಿದರು.

ಓದಿ:ಪೌರ ಕಾರ್ಮಿಕರ​ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಸಿಎಂ ಬಘೇಲ್‌ಗೆ ಪತ್ರ : ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿರುವ ಡೊಂಗರಗಢದ ಬಾಮಲೇಶ್ವರಿ ದೇವಸ್ಥಾನಕ್ಕೆ ಹೆಲಿಕಾಪ್ಟರ್‌ ಮೂಲಕ ಪ್ರವಾಸ ಮಾಡುವ ಸಂಬಂಧ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್​ರಿಗೆ ಪತ್ರ ಬರೆಯುತ್ತೇವೆ. ರಾಜ್ಯ ಸರ್ಕಾರ ಸಹಾಯಧನ ನೀಡಲು ಒಪ್ಪಿದರೆ ಖಂಡಿತಾ ಡೊಂಗರಗಢದಲ್ಲಿ ಹೆಲಿಪ್ಯಾಡ್ ನಿರ್ಮಿಸುತ್ತೇವೆ. ರಾಯ್‌ಪುರ ಮತ್ತು ನಾಗ್ಪುರದಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವುದು ಸುಲಭವಾಗುತ್ತದೆ ಎಂದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾಧ್ಯಮಗಳೊಂದಿಗೆ ಮಾತನಾಡುತ್ತ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಡವರಿಗಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ರಾಜ್ಯ ಸರ್ಕಾರಕ್ಕೆ ತನ್ನ ಪಾತ್ರವನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details