ನವದೆಹಲಿ:ವಿಶ್ವದ ನಂಬರ್ 1 ಸಿರಿವಂತನಾದ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ ಬಳಿಕ ಒಂದಿಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಬ್ಲೂಟಿಕ್ಗೆ (ಪರಿಶೀಲಿಸಿದ ಖಾತೆ) ಹಣ ನಿಗದಿ ಮಾಡಿದ್ದಕ್ಕೆ ಹಾಗೂ ಸಂಸ್ಥೆಯ ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿದ್ದಕ್ಕೆ ಟೀಕೆಗೆ ಗುರಿಯಾಗಿದ್ದರು. ಕಂಪನಿಯ ಸಿಇಒ ಬದಲಾಗಬೇಕು ಎಂಬ ಕೂಗು ಕೇಳಿಬಂದಿತ್ತು. ಇದೀಗ ಮಸ್ಕ್ ಸಿಇಒ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಲಾನ್ ಮಸ್ಕ್, ಈ ಕೆಲಸವನ್ನು ನಿರ್ವಹಿಸುವ ವ್ಯಕ್ತಿ ಸಿಕ್ಕ ತಕ್ಷಣ ತಾವು ಸಿಒಇ ಹುದ್ದೆಯಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ಅಲ್ಲಿಯವರೆಗೂ ನಾನು ಸಾಫ್ಟ್ವೇರ್ ಮತ್ತು ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ಹೇಳಿದ್ದಾರೆ.