ನವದೆಹಲಿ: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 12 ದಿನಗಳಲ್ಲಿ 10 ಬಾರಿ ಇಂಧನ ಬೆಲೆ ಏರಿಕೆ ಕಂಡಿದ್ದು, ಈವರೆಗೆ ಪ್ರತಿ ಲೀಟರ್ ಇಂಧನಗಳಮೇಲೆ 7.20 ರೂಪಾಯಿ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ, ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 102.61 ರೂಪಾಯಿಯಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 93.87 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 85 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ ಪೆಟ್ರೋಲ್ ಬೆಲೆ 117.57 ರೂಪಾಯಿ ಮತ್ತು ಮತ್ತು ಪ್ರತಿ ಲೀಟರ್ ಡೀಸೆಲ್ಗೆ 101.79 ರೂಪಾಯಿ ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 108.13 ರೂಪಾಯಿ, ಡೀಸೆಲ್ ಬೆಲೆ 92.03 ರೂಪಾಯಿ ಇದೆ.