ನವದೆಹಲಿ:ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ದೇಶೀಯ ಲಭ್ಯತೆ ಮತ್ತು ಬೆಲೆ ಸ್ಥಿರತೆ ಕಾಯ್ದುಕೊಳ್ಳುವ ಸಲುವಾಗಿ ಮಾರುಕಟ್ಟೆಯ ಅವಧಿ ಸೆಪ್ಟೆಂಬರ್‌ಗೆ ಕೊನೆಗೊಳ್ಳುವಂತೆ ವರ್ಷದಲ್ಲಿ 10 ಲಕ್ಷ ಟನ್‌ಗಳಷ್ಟು ಸಕ್ಕರೆಯನ್ನು ರಫ್ತು ಮಾಡಬೇಕು. ಇದು ಜೂನ್ 1 ರಿಂದಲೇ ಜಾರಿಯಾಗಬೇಕು ಎಂಬ ಮಿತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಲಭ್ಯತೆಯನ್ನು ಹೆಚ್ಚಿಸುವ ಮತ್ತು ಅದರ ಬೆಲೆ ಏರಿಕೆಯನ್ನು ತಡೆಯುವ ಸಲುವಾಗಿ ಸಕ್ಕರೆ ರಫ್ತು (ಕಚ್ಚಾ, ಸಂಸ್ಕರಿಸಿದ ಮತ್ತು ಬಿಳಿ ಸಕ್ಕರೆ) ಜೂನ್ 1, 2022 ರಿಂದ ನಿರ್ಬಂಧಿತ ವರ್ಗದಲ್ಲಿ ಇರಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ.