ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್ ಕಳವಳ ವ್ಯಕ್ತಪಡಿಸಿರುವಂತೆ ಜಾಗತಿಕ ಆರ್ಥಿಕ ಹಿಂಜರಿತದ ಪರಿಣಾಮವು ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಷ್ಟೊಂದು ಭಾರಿ ಪ್ರಮಾಣದ ಹಾನಿಯನ್ನುಂಟು ಮಾಡುವ ಸಾಧ್ಯತೆ ಇಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ದಿನೇಶ್ ಖಾರಾ ಭರವಸೆ ನೀಡಿದ್ದಾರೆ.
6.8 ರಷ್ಟು ಜಿಡಿಪಿ ಬೆಳವಣಿಗೆ ದರ ಮತ್ತು ಹಣದುಬ್ಬರವು ಹೆಚ್ಚು ನಿಯಂತ್ರಣದಲ್ಲಿದೆ ಎಂದು ಆರ್ಬಿಐ ಹೇಳಿದ್ದು, ಭಾರತದ ಅರ್ಥ ವ್ಯವಸ್ಥೆ ಸಮಂಜಸವಾಗಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖಾರಾ ಹೇಳಿದ್ದಾರೆ.