ಮುಂಬೈ:ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಮುಖೇಶ್ ಅಂಬಾನಿ ಅವರು ಕೆಳಗಿಳಿದಿದ್ದು, ಅವರ ಪುತ್ರ ಆಕಾಶ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪ್ರಕಟಣೆ ಹೊರಡಿಸಿದೆ.
ಮುಖೇಶ್ ಅಂಬಾನಿ ಜೂನ್ 27ರಂದು ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಇಂದು ಆಕಾಶ್ ಅಂಬಾನಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾಗಿ ಪ್ರಕಟಣೆಯಿಂದ ತಿಳಿದು ಬಂದಿದೆ. ಇದರ ಜೊತೆಗೆ ರಿಲಯನ್ಸ್ ಜಿಯೋದ ನಾನ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಸಹ ನೇಮಕಗೊಂಡಿದ್ದಾರೆ.