ನವದೆಹಲಿ:ಹೆಚ್ಚುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ರೆಪೊ ದರವನ್ನು 2020ರ ಬಳಿಕ ಇದೇ ಮೊದಲ ಬಾರಿಗೆ ಹೆಚ್ಚಳ ಮಾಡಲಾಗಿದೆ. ರೆಪೊ ದರದ 40 ಮೂಲಾಂಶವನ್ನು ಶೇ 4.40ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೇ ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿದೆ.
ಈ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಜಾಗತಿಕ ಆರ್ಥಿಕ ಅಸ್ಥಿರತೆ ನಡುವೆಯೂ ಭಾರತೀಯ ಆರ್ಥಿಕತೆ ಸ್ಥಿರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ರೆಪೋ ದರವನ್ನು ಹೆಚ್ಚಳ ಮಾಡಲಾಗಿದೆ. 40 ರ ಮೂಲಾಂಶದಲ್ಲಿ ಶೇ.4.44 ಪೈಸೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ವಿತ್ತೀಯ ನೀತಿ ಸಮಿತಿ (ಎಂಪಿಸಿ) ಈ ಬಗ್ಗೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸುವ ನಿಟ್ಟಿನಲ್ಲಿ ಭೌಗೋಳಿಕ- ರಾಜಕೀಯ ಉದ್ವಿಗ್ನತೆ, ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಜಾಗತಿಕವಾಗಿ ಸರಕುಗಳ ಕೊರತೆಯು ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ಅವರು ಹೇಳಿದರು.
ಕ್ಯಾಶ್ ರಿಸರ್ವ್ ರೇಷಿಯೊವನ್ನು ಬೇಡಿಕೆಯ ಅನುಗುಣವಾಗಿ ಶೇ 4.5ಕ್ಕೆ ಹೆಚ್ಚಿಸಲಾಗಿದೆ. ಇದು 2022ರ ಮೇ 21ರಿಂದ ಜಾರಿಗೆ ಬರಲಿದೆ ಎಂದೂ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದರು.
ಓದಿ:39 ಸಾವಿರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ಅಂಚೆ ಕಚೇರಿ.. 10th ಪಾಸ್ ಆದವರಿಗೆ ಒಳ್ಳೆಯ ಅವಕಾಶ!