ಕರ್ನಾಟಕ

karnataka

ETV Bharat / city

ಬೆಳಗಾವಿಯ 12 ಪತ್ರಕರ್ತರಿಗೆ ವಕ್ಕರಿಸಿದ ಕೊರೊನಾ; ಚಿಕಿತ್ಸಾ ಸೌಲಭ್ಯಕ್ಕೆ ಡಿಸಿಎಂ ಸವದಿ ಸೂಚನೆ

ಬೆಳಗಾವಿ ಜಿಲ್ಲೆಯಲ್ಲಿ 12ಮಂದಿ ಪತ್ರಕರ್ತರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಾದ ಚಿಕಿತ್ಸಾ ಸೌಲಭ್ಯಗಳನ್ನು ಮತ್ತು ಔಷಧೋಪಚಾರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Corona
Corona

By

Published : May 1, 2021, 8:52 PM IST

ಬೆಳಗಾವಿ: ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಸ್ಥೆಯ 12 ಜನ ಮಾಧ್ಯಮ ಪ್ರತಿನಿಧಿಗಳಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ‌. ಯಾರಿಗೂ ರೋಗದ ಲಕ್ಷಣಗಳಿಲ್ಲ. ಹೀಗಾಗಿ ಎಲ್ಲರೂ ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ವರದಿಗೆ ತೆರಳುವ ಪತ್ರಕರ್ತರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂಬ ಚುನಾವಣೆ ಆಯೋಗದ ನಿರ್ದೇಶನದ ಮೇರೆಗೆ ಎರಡು ದಿನಗಳ ಹಿಂದೆ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ವಾರ್ತಾ ಭವನದಲ್ಲಿ 70 ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು. ಅದರಲ್ಲಿ 12 ಪತ್ರಕರ್ತರಿಗೆ ಸೋಂಕು ದೃಢಪಟ್ಟಿದೆ.

ಚಿಕಿತ್ಸಾ ಸೌಲಭ್ಯಕ್ಕೆ ಡಿಸಿಎಂ ಸೂಚನೆ:ಬೆಳಗಾವಿ ಜಿಲ್ಲೆಯಲ್ಲಿ 12ಮಂದಿ ಪತ್ರಕರ್ತರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಾದ ಚಿಕಿತ್ಸಾ ಸೌಲಭ್ಯಗಳನ್ನು ಮತ್ತು ಔಷಧೋಪಚಾರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರಿಗೆ ಖುದ್ದಾಗಿ ಮಾತನಾಡಿ ಸೂಚನೆ ನೀಡಿದ್ದಾರೆ. ಪತ್ರಕರ್ತರು ಸಾಮಾನ್ಯವಾಗಿ ತೀವ್ರ ಕೆಲಸದ ಒತ್ತಡದಲ್ಲಿ ಇರುತ್ತಾರೆ. ಅವರು ಸಹ ಸಾರ್ವಜನಿಕರಿಗೆ ಸುದ್ದಿ ನೀಡುವ ಕೆಲಸಕ್ಕಾಗಿ ಕೊರೊನಾ ವಾರಿಯರ್ಸ್ ಗಳಂತೆ ಸದಾ ದುಡಿಯುತ್ತಿರುತ್ತಾರೆ. ಆದ್ದರಿಂದ ಅವರ ಆರೋಗ್ಯ ಕಾಳಜಿಯೂ ಅಷ್ಟೇ ಮುಖ್ಯ. ಆದ್ದರಿಂದ ಸ್ಥಳೀಯ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಈ ಪತ್ರಕರ್ತರ ಆರೋಗ್ಯ ಕಾಳಜಿಗೆ ಆದ್ಯತೆ ನೀಡಬೇಕು ಕ್ವಾರಂಟೈನ್ ಆಗಲಿರುವ ಪತ್ರಕರ್ತರ ಕುಟುಂಬಕ್ಕೆ ಅಗತ್ಯ ವೈದ್ಯಕೀಯ ಮಾರ್ಗದರ್ಶನಗಳನ್ನು ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಪಾಸಿಟಿವ್ ದೃಢಪಟ್ಟಿರುವ ಪ್ರಕರಣಗಳಲ್ಲಿ ಪತ್ರಕರ್ತರು ಭಯಪಡದೆ ಸೂಕ್ತ ಮುಂಜಾಗ್ರತೆಯೊಂದಿಗೆ ಹೆಚ್ಚಿನ ಆರೋಗ್ಯ ಕಾಳಜಿ ವಹಿಸಬೇಕು. ಆದಷ್ಟು ಶೀಘ್ರವಾಗಿ ಅವರು ಚೇತರಿಸಿಕೊಂಡು ಮತ್ತೆ ಮೊದಲಿನಂತೆ ಕರ್ತವ್ಯ ನಿರ್ವಹಿಸುವಂತಾಗಲಿ ಎಂದು ಸವದಿ ಹಾರೈಸಿದ್ದಾರೆ.

ABOUT THE AUTHOR

...view details