ಬೆಳಗಾವಿ :ಶಿವಾಜಿ ಮಹಾರಾಜ, ಸಂಗೊಳ್ಳಿ ರಾಯಣ್ಣ ಪ್ರತಿಮೆಗಳಿಗೆ ಅಪಮಾನ ಪ್ರಕರಣ ಸಂಬಂಧ ಉಂಟಾದ ಗಲಭೆ ಹಿನ್ನೆಲೆ ಬೆಳಗಾವಿಯಲ್ಲಿ ಜಾರಿಗೊಳಿಸಿರುವ 144 ಸೆಕ್ಷನ್ ನಿಷೇಧಾಜ್ಞೆ ಸೋಮವಾರದವರೆಗೆ ಮುಂದುವರೆಯಲಿದೆ.
ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿನ ಕಲ್ಲು ತೂರಾಟದಿಂದಾಗ ಪರಿಸ್ಥಿತಿ ಹದಗೆಟ್ಟಿತ್ತು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರ ಮತ್ತು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಇದೀಗ ಅದನ್ನು ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ ಹಾಗೂ ತಾಲೂಕಿನಾದ್ಯಂತ ನಿಷೇಧಾಜ್ಞೆ ಇರಲಿದೆ. ಐದಕ್ಕಿಂತ ಹೆಚ್ಚು ಜನರು ಸೇರದಂತೆ ಮತ್ತು ಸಭೆ-ಸಮಾರಂಭ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.