ಕರ್ನಾಟಕ

karnataka

ETV Bharat / city

ಗೋವಾಗೆ ತೆರಳುತ್ತಿದ್ದ ಯುವಕರಿಗೆ ಎದುರಾದ ಯಮ: ಇಬ್ಬರು ದುರ್ಮರಣ, ಮೂವರ ಸ್ಥಿತಿ ಗಂಭೀರ - ಕಾರು ಕಂಟೇನರ್ ಡಿಕ್ಕಿ

ಗೋವಾಗೆ ತೆರಳುತ್ತಿದ್ದ ಯುವಕರ ಕಾರಿಗೆ ಕಂಟೇನರ್ ಡಿಕ್ಕಿಯಾಗಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

accident
ಅಪಘಾತ

By

Published : Jul 2, 2022, 9:05 PM IST

ಬೆಳಗಾವಿ: ಕಾರು ಮತ್ತು‌ ಕಂಟೇನರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗರಾಗಳಿ ಗ್ರಾಮದಲ್ಲಿ ಸಂಭವಿಸಿದೆ. ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ಕಾರು ಚಾಲಕ ಸಾಗರ್ ಬಿಡಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಯುವಕ ವಿಠ್ಠಲ ಕಾಕಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅಳ್ನಾವರದ ಗಿರೀಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರಮಾಕಾಂತ್ ಪಾಲ್ಕರ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾನಾಪೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗೋವಾಗೆ ಹೊರಟಿದ್ದ ಯುವಕರ ಕಾರಿಗೆ ಖಾನಾಪೂರ ತಾಲೂಕಿನ ನಾಗರಗಳಿ ಗ್ರಾಮದ ಹೊರವಲಯದಲ್ಲಿರುವ ಕಂಟೇನರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

(ಇದನ್ನೂ ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ)

ಅಪಘಾತ

ABOUT THE AUTHOR

...view details