ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದ ತಂಡ ರಚಿಸಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು.