ಕರ್ನಾಟಕ

karnataka

ETV Bharat / city

40% ಕಮಿಷನ್​ ಆರೋಪ.. WhatsApp ಮೆಸೇಜ್​ ಕಳಿಸಿ ಬೆಳಗಾವಿಯ ಗುತ್ತಿಗೆದಾರ ನಾಪತ್ತೆ! - 40 percent commission Allegation against minister ks eshwarappa

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ 40 ಪರ್ಸೆಂಟ್​​ ಕಮಿಷನ್​ ಆರೋಪ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಆರೋಪ ಮಾಡಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ.

Contractor Santosh Patil
ಗುತ್ತಿಗೆದಾರ ಸಂತೋಷ ಪಾಟೀಲ್

By

Published : Apr 12, 2022, 11:53 AM IST

Updated : Apr 12, 2022, 12:46 PM IST

ಬೆಳಗಾವಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಕುಂದಾನಗರಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್​​ ಆ್ಯಪ್​​ ಮೆಸೇಜ್ ಕಳಿಸಿ ನಾಪತ್ತೆ ಆಗಿದ್ದಾರೆ ಎಂದು ತಿಳಿದು ಬಂದಿದೆ.

ವಾಟ್ಸ್​​ ಆ್ಯಪ್​​ ಮೆಸೇಜ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ ಕಳಿಸಿದ್ದಾರೆ. ಈ ಡೆತ್‌ನೋಟ್ ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸದ್ಯ ಅವರ ಮೊಬೈಲ್ ಉಡುಪಿಯಲ್ಲಿ ಆ್ಯಕ್ಟಿವ್ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಸಂತೋಷ ಪಾಟೀಲ್ ನಿವಾಸ ಲಾಕ್ ಆಗಿದೆ. ಹಿಂಡಲಗಾ ಸಮರ್ಥ ಕಾಲೋನಿಯ ನಿವಾಸ ಒಂದು ವಾರದಿಂದ ಲಾಕ್ ಇದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸಚಿವ ಈಶ್ವರಪ್ಪ ತಾವು ಮಾಡಿದ 108 ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಸಂತೋಷ ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು. ಇದೀಗ ಬೆಳಗಾವಿ ಪೊಲೀಸರು ಉಡುಪಿ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ:ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಕಮಿಷನ್‌ ಆರೋಪ: ಪ್ರಧಾನಿ ಮಧ್ಯಸ್ಥಿಕೆಗೆ ಕೈ ಸಂಸದರ​ ಆಗ್ರಹ

Last Updated : Apr 12, 2022, 12:46 PM IST

ABOUT THE AUTHOR

...view details