ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳಿಗೆ 50 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ ನೀರಿನ ಮಟ್ಟದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.
ಕೃಷ್ಣಾನದಿಗೆ ಮಹಾರಾಷ್ಟ್ರದಿಂದ 50 ಸಾವಿರ ಕ್ಯೂಸೆಕ್ ನೀರು - ಕೃಷ್ಣಾ ನದಿ
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳಿಗೆ 50 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಕೃಷ್ಣಾ ನದಿ
ಮಹಾರಾಷ್ಟ್ರದ ರಾಧಾನಗರಿ, ಕೊಯ್ನಾ, ಪಾಟಗಾಂವ, ಮಹಾಬಳೇಶ್ವರ, ಸಾಂಗಲಿ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 40 ಸಾವಿರ, ದೂಧಗಂಗಾ ನದಿಯಿಂದ 10 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ.