ಕರ್ನಾಟಕ

karnataka

ETV Bharat / city

ಲೋಕಸಭಾ ಉಪಚುನಾವಣೆ: ಬೆಳಗಾವಿ ಚೆಕ್ ಪೋಸ್ಟ್​ಗಳಲ್ಲಿ 62.55 ಲಕ್ಷ ರೂ. ನಗದು ವಶ

ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 27 ಚೆಕ್ ಪೋಸ್ಟ್​​​ಗಳಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಎಸ್.ಎಸ್.ಟಿ. ತಂಡಗಳು ತಪಾಸಣೆ ಸಂದರ್ಭದಲ್ಲಿ 62,55,510 ರೂಪಾಯಿ ನಗದು ವಶಪಡಿಸಿಕೊಂಡಿವೆ. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಪೊಲೀಸ್ ಮತ್ತಿತರ ತಂಡಗಳಿಂದ ಪರಿಶೀಲಿಸಿದ ಬಳಿಕ 19,83,890 ಲಕ್ಷ ರೂಪಾಯಿಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇನ್ನುಳಿದ 42,71,620 ರೂಪಾಯಿಗಳನ್ನು ನಿಯಮಾವಳಿ ಪ್ರಕಾರ ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿರುತ್ತದೆ.

By

Published : Apr 10, 2021, 10:04 PM IST

ಲೋಕಸಭಾ ಉಪಚುನಾವಣೆ
ಲೋಕಸಭಾ ಉಪಚುನಾವಣೆ

ಬೆಳಗಾವಿ: ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಅಕ್ರಮ‌ ಹಣ ಅಥವಾ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಚೆಕ್ ಪೋಸ್ಟ್​ಗಳಲ್ಲಿ ಇದುವರೆಗೆ 62.55 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 27 ಚೆಕ್ ಪೋಸ್ಟ್​​ಗಳಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಎಸ್.ಎಸ್.ಟಿ. ತಂಡಗಳು ತಪಾಸಣೆ ಸಂದರ್ಭದಲ್ಲಿ 62,55,510 ರೂಪಾಯಿ ನಗದು ವಶಪಡಿಸಿಕೊಂಡಿವೆ. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಪೊಲೀಸ್ ಮತ್ತಿತರ ತಂಡಗಳಿಂದ ಪರಿಶೀಲಿಸಿದ ಬಳಿಕ 19,83,890 ಲಕ್ಷ ರೂಪಾಯಿಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇನ್ನುಳಿದ 42,71,620 ರೂಪಾಯಿಗಳನ್ನು ನಿಯಮಾವಳಿ ಪ್ರಕಾರ ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿರುತ್ತದೆ.

4 ಸಾವಿರ ಲೀಟರ್ ಮದ್ಯ ವಶ

ಉಪಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ತಪಾಸಣೆ ಕೈಗೊಂಡು ಒಟ್ಟಾರೆ 11.25 ಲಕ್ಷ ರೂ. ಮೌಲ್ಯದ 4020 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಅಬಕಾರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಾರೆ 42.26 ಲಕ್ಷ ಮೌಲ್ಯದ ಒಟ್ಟು 16 ಬೈಕ್​​ಗಳು, 1 ಕಂಟೇನರ್, 1 ಟ್ಯಾಂಕರ್, 4 ಕಾರು‌ ಹಾಗೂ ಒಂದು ಜೀಪು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಮತ್ತು ಪೊಲೀಸ್ ಕಾರ್ಯಾಚರಣೆಯಲ್ಲಿ ಮದ್ಯ‌ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಬಕಾರಿಗೆ ಸಂಬಂಧಿಸಿದಂತೆ ಒಟ್ಟಾರೆ 128 ಉಲ್ಲಂಘನೆ ಪ್ರಕರಣಗಳು ವರದಿಯಾಗಿರುತ್ತವೆ.

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ- 22 ದೂರು ದಾಖಲು

ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಇದುವರೆಗೆ ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟಾರೆ 22 ದೂರುಗಳು ಸ್ವೀಕೃತಿಯಾಗಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಈ 22 ದೂರುಗಳ ಪೈಕಿ 18 ಪ್ರಕರಣಗಳನ್ನು ಪರಿಶೀಲಿಸಿ ಒಟ್ಟಾರೆ 56000 ರೂಪಾಯಿ ದಂಡವನ್ನು ವಿಧಿಸಲಾಗಿರುತ್ತದೆ. 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಚ್ಚರಿಕೆಯನ್ನು ನೀಡಲಾಗಿರುತ್ತದೆ. ಇನ್ನುಳಿದ ಒಂದು ದೂರಿಗೆ ಸಂಬಂಧಿಸಿದಂತೆ ಪ್ರಕರಣವು ಖಚಿತಪಟ್ಟಿರುವುದಿಲ್ಲ. ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಸಂಬಂಧಿಸಿದಂತೆ ಇದೀಗ ಜಿಲ್ಲೆಯ ಎಲ್ಲ ನಗರ ಪ್ರದೇಶಗಳಲ್ಲಿ ಮಾರ್ಷಲ್​​ಗಳನ್ನು ನೇಮಿಸಿ, ದಂಡ ಪ್ರಕ್ರಿಯೆ ಇನ್ನಷ್ಟು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details