ಬೆಳಗಾವಿ : ಭೀಕರ ಪ್ರವಾಹಕ್ಕೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ಬದುಕು ಬೀದಿಗೆ ಬಿದ್ದ ಪರಿಣಾಮ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಪ್ರವಾಹದಿಂದ ಬೀದಿಗೆ ಬಿದ್ದ ಬದುಕು : ಬೈಲಹೊಂಗಲದಲ್ಲಿ ನೇಣಿಗೆ ಶರಣಾದ ರೈತ
ಭೀಕರ ಪ್ರವಾಹಕ್ಕೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ಬದುಕು ಬೀದಿಗೆ ಬಿದ್ದ ಪರಿಣಾಮ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಮಹಾಂತೇಶ್ ಸಂಗಪ್ಪನವರ್ (41) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸುಮಾರು 10 ಎಕರೆ ತೋಟದಲ್ಲಿ ಕೃಷಿ ಮಾಡಿದ್ದರು. ಮಲಪ್ರಭಾ ನದಿಯಿಂದ ಉಂಟಾದ ಭೀಕರ ಪ್ರವಾಹಕ್ಕೆ ರೈತ ಬೆಳೆದ ಬೆಳೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಜೊತೆಗೆ ಸಾಲ ಮಾಡಿ ಕಟ್ಟಿದ್ದ ಮನೆ ಸಹ ಬಿದ್ದ ಪರಿಣಾಮ ರೈತ ನೇಣಿಗೆ ಶರಣಾಗಿದ್ದಾನೆ.
ಸಾಲ ಮಾಡಿ ಕೃಷಿ ಮಾಡಿದ್ದ ರೈತನಿಗೆ ಇನ್ನೇನು ಫಲ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದಾಗ ಪ್ರವಾಹ ಉಂಟಾಗಿ, ಬ್ಯಾಂಕಿನಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.