ಕರ್ನಾಟಕ

karnataka

ETV Bharat / city

ಖಾನಾಪುರದಲ್ಲಿ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ.. ಕಂದಮ್ಮಗಳು ಕಣ್ಬಿಡುವ ಮುನ್ನವೇ ತಾಯಿ ವಿಧಿವಶ - ಅವಳಿ ಮಕ್ಕಳಿಗೆ ಜನ್ಮ ನೀಡಿ ತಾಯಿ ಸಾವು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನವಜಾತು ಶಿಶುಗಳು ಸಮರ್ಪಕ ಬೆಳವಣಿಗೆ ಹೊಂದದ ಕಾರಣ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ನಿಗಾ ಘಟಕದಲ್ಲಿಡಲಾಗಿದೆ.

died
ಮಹಿಳೆ

By

Published : Mar 12, 2022, 4:38 PM IST

ಬೆಳಗಾವಿ:ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಖಾನಾಪೂರ‌ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ್​ ಶಿಂಧೆ(24) ಮೃತ ಮಹಿಳೆ.

ಉಜ್ವಲಾ ಅವರಿಗೆ ನಿನ್ನೆ ತೀವ್ರ ಹೆರಿಗೆನೋವು ಕಾಣಿಸಿಕೊಂಡಿದ್ದು, ಅವರನ್ನು ಖಾನಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಆಕೆಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದು ಗೊತ್ತಾಗಿದೆ. ಬಳಿಕ ವೈದ್ಯರು ಕೂಡಲೇ ಹೆರಿಗೆ ಮಾಡಿಸಿದ್ದರು.

ಅವಳಿ ಮಕ್ಕಳಿಗೆ ಜನ್ಮ ನೀಡಿದ ಉಜ್ವಲಾ

ಹೆರಿಗೆಯ ಬಳಿಕ ನವಜಾತ ಶಿಶುಗಳ ಜನನವಾಗಿದೆ. ಶಿಶುಗಳ ಆರೋಗ್ಯ ಪರೀಕ್ಷಿಸಿದ ವೈದ್ಯರು ಸಮರ್ಪಕವಾಗಿ ಬೆಳವಣಿಗೆ ಹೊಂದಿರದ ಕಾರಣ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಿ ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ‌. ಹೆರಿಗೆ ಸಮಯದಲ್ಲಿ ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಉಜ್ವಲಾ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಸದ್ಯಕ್ಕೆ ನವಜಾತ ಶಿಶುಗಳು ಚೇತರಿಸಿಕೊಳ್ಳುತ್ತಿವೆ ಎಂದು ಮೂಲಗಳು ತಿಳಿಸಿವೆ.

ಓದಿ:ಕೂದಲು ಕಸಿ ಮಾಡಿಸಿಕೊಂಡ ಮರುದಿನವೇ ಕಾನ್​ಸ್ಟೇಬಲ್​ ಸಾವು.. 2 ತಿಂಗಳಲ್ಲಿ ಮದುವೆಯಾಗಬೇಕಿದ್ದ ಪೊಲೀಸ್​ ಇನ್ನಿಲ್ಲ!

ABOUT THE AUTHOR

...view details