ಕರ್ನಾಟಕ

karnataka

ETV Bharat / city

ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಳಗಾವಿ, ಚಿಕ್ಕಬಳ್ಳಾಪುರದಲ್ಲಿ ಎಸಿಬಿ ದಾಳಿ - ಅಕ್ರಮ ಆಸ್ತಿ ಗಳಿಕೆ ಆರೋಪ

ಬೆಳಗಾವಿ ಮತ್ತು ಚಿಕ್ಕಬಳ್ಳಾಪುರದಲ್ಲಿ ಬೆಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿಗೆ ಮುಂದಾಗಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಎಸಿಬಿ ದಾಳಿ
ACB raid

By

Published : Nov 24, 2021, 10:25 AM IST

Updated : Nov 24, 2021, 10:34 AM IST

ಬೆಳಗಾವಿ/ಚಿಕ್ಕಬಳ್ಳಾಪುರ: ಜಿಲ್ಲೆಯ ಮೂವರು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯ ಗೋಕಾಕ್ ನಗರದಲ್ಲಿರುವ ಸದಾಶಿವ ಮರಲಿಂಗಣ್ಣವರ್ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು 6 ಕಡೆ ದಾಳಿ ನಡೆಸಲಾಗಿದೆ. ಸದಾಶಿವ ಅವರು ಆರ್‌ಟಿಒದಲ್ಲಿ ಮೋಟಾರ್ ವಾಹನ ಇನ್ಸ್​ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ACB raid in Belagavi: ಬೈಲಹೊಂಗಲ ಪಟ್ಟಣದ ಅಡಿವಿ ಸಿದ್ದೇಶ್ವರ ಮಾಸ್ತಿ ಎಂಬುವರ ಮನೆ ಮೇಲೂ ಸಹ ದಾಳಿ ನಡೆಸಲಾಗಿದೆ. ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿಯಾಗಿ ಅಡಿವಿ ಸಿದ್ದೇಶ್ವರ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳಗಾವಿ ನಗರದ ನಾತಾಜಿ ಪಾಟೀಲ್ ಮನೆ, ಕಚೇರಿ ಮೇಲೆ ದಾಳಿ ಆಗಿದೆ. ಇವರು ಹೆಸ್ಕಾಂ ನಲ್ಲಿ ಲೈನ್ ಮೆಕ್ಯಾನಿಕ್ ವಿಭಾಗದಲ್ಲಿದ್ದಾರೆ. ಇವರ ಕಚೇರಿ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಲಾಗಿದೆ. ಎಸಿಬಿ ಎಸ್‌ಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಕೆಎಂಎಫ್ ಡೆಪ್ಯೂಟಿ ಮ್ಯಾನೇಜರ್ ಮನೆ ಮೇಲೆ ದಾಳಿ

ACB raid in chikkaballapur: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೆಎಂಎಫ್ ಡೆಪ್ಯೂಟಿ ಮ್ಯಾನೇಜರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಂಎಫ್ ಡೆಪ್ಯೂಟಿ ಮ್ಯಾನೇಜರ್ ಕೃಷ್ಣಾರೆಡ್ಡಿ ಅವರಿಗೆ ಸಂಬಂಧಿಸಿದ ಮನೆಯೊಂದು ಚಿಂತಾಮಣಿ ನಗರದ ಮಾಳಪ್ಪಲ್ಲಿಯಲ್ಲಿದ್ದು, ಖಚಿತ ಮಾಹಿತಿ ಮೆರೆಗೆ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ.

ಸದ್ಯಕ್ಕೆ ಕೃಷ್ಣಾರೆಡ್ಡಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಿವೈಎಸ್​ಪಿ ಸುದೀರ್,ಇನ್ಸ್‌ಪೆಕ್ಟರ್ ರವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.

Last Updated : Nov 24, 2021, 10:34 AM IST

ABOUT THE AUTHOR

...view details