ಬೆಳಗಾವಿ:ಅನಾಮಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಎಸ್. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.
ಓದಿ: ಕೊರೊನಾ ಮಧ್ಯೆ ಕಳಪೆ ಬೀಜಗಳ ಹಾವಳಿ: ಅನ್ನದಾತನಿಗೆ ಗಾಯದ ಮೇಲೆ ಬರೆ
ಬೆಳಗಾವಿ:ಅನಾಮಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಎಸ್. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.
ಓದಿ: ಕೊರೊನಾ ಮಧ್ಯೆ ಕಳಪೆ ಬೀಜಗಳ ಹಾವಳಿ: ಅನ್ನದಾತನಿಗೆ ಗಾಯದ ಮೇಲೆ ಬರೆ
ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳುಹಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಈಗಾಗಲೇ ಇಂಗ್ಲೆಂಡ್, ಕೆನಡಾದಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳನ್ನು ಕಳಿಸಲಾಗಿದೆ. ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಎಲ್ಲಿಂದ ಕಳುಹಿಸುತ್ತಾರೆ ಎಂಬ ವಿವರಗಳೇ ಇರುವುದಿಲ್ಲ.
ಈ ಬೀಜಗಳ ಬಳಕೆಯಿಂದ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದ್ದು, ಕ್ರಮೇಣ ಭೂಮಿಯೇ ಬಂಜರಾಗುವ ಸಾಧ್ಯತೆಯೂ ಇದೆ ಎಂದು ರೈತರಿಗೆ ಎಚ್ಚರಿಸಿದ್ದಾರೆ. ಇಂತಹ ಬಿತ್ತನೆ ಬೀಜದ ಪೊಟ್ಟಣಗಳ ಪಾರ್ಸಲ್ ಬಂದರೆ ರೈತರು ವಾಪಸ್ ಕಳುಹಿಸಬೇಕು. ಒಂದು ವೇಳೆ ಸ್ವೀಕರಿಸಿದರೂ ಪೊಟ್ಟಣದ ಸಮೇತ ಅದನ್ನು ಸುಟ್ಟು ಹಾಕಬೇಕು ಇಲ್ಲವೆ, ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಎಸ್. ಪಾಟೀಲ ತಿಳಿಸಿದ್ದಾರೆ.