ಬೆಳಗಾವಿ: ನಗರದ ಕೆಎಲ್‍ಇ ಜವಾಹರಲಾಲ್ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ಸಂಸ್ಥೆಯ 10ನೇ ಘಟಿಕೋತ್ಸವ ಸಮಾರಂಭವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಯುವ ವೈದ್ಯರು ಕೊರೊನಾ ಸಂದರ್ಭದಲ್ಲಿ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗುವುದರ ಜೊತೆಗೆ ಆರೋಗ್ಯವಂತ ಹಾಗೂ ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಡಾ.ಕೆ. ಸುಧಾಕರ್ ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದ ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಚಿನ್ನ, ಬೆಳ್ಳಿ ಪದಕ ಸಹಿತ ಪ್ರಮಾಣ ಪತ್ರ ವಿತರಿಸಲಾಯಿತು.
ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯೂಕೇಶನ್ ಆ್ಯಂಡ್ ರಿಸರ್ಚ್ ವಿಶ್ವವಿದ್ಯಾಲಯದ ಕುಲಪತಿ, ಕೆಎಲ್‍ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಉಪಕುಲಪತಿ ಡಾ.ವಿವೇಕ ಸಾವೋಜಿ, ಡಾ.ಸುನೀಲ ಜಲಾಲಪುರೆ, ಡಾ.ವಿ.ಎ.ಕೋಠಿವಾಲೆ ಪಾಲ್ಗೊಂಡಿದ್ದರು.