ಅಥಣಿ (ಬೆಳಗಾವಿ): ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದ ವತಿಯಿಂದ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಥ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ ವಹಿಸಿ: ವಾಲ್ಮೀಕಿ ಸಮುದಾಯದ ಮನವಿ - Belgaum News
ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.
ಈ ವೇಳೆ ಮಾತನಾಡಿದ ವಕೀಲ ಭೀಮಗೌಡ ಪರಮಗೌಡರ್, ಆಕೆ ದಲಿತ ಯುವತಿ ಎಂಬ ಕಾರಣಕ್ಕೆ ತನಿಖೆ ಇದುವರೆಗೂ ವೇಗ ಪಡೆದುಕೊಂಡಿಲ್ಲ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ವಾಲ್ಮೀಕಿ ಸಮುದಾಯದಿಂದ ದೇಶಾದ್ಯಂತ ಪ್ರತಿಭಟನೆ ಮಾಡಲಾಗುವುದು. ರಾಮ ರಾಜ್ಯವೆಂದು ಹೆಸರಾದ ಉತ್ತರಪ್ರದೇಶದಲ್ಲಿ ಶ್ರೀರಾಮಚಂದ್ರನ ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಸಮಾಜದ ಯುವತಿ ಮೇಲೆ ಈ ರೀತಿ ದುಷ್ಕೃತ್ಯ ಎಸಗಿರುವುದು ಇಡೀ ಮನುಕುಲವನ್ನೇ ತಲೆತಗ್ಗಿಸುವಂತೆ ಮಾಡಿದೆ.
ಈ ಪ್ರಕರಣದಲ್ಲಿ ಉತ್ತರಪ್ರದೇಶ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡನೀಯವಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.