ಬೆಳಗಾವಿ: ರಾಮನಗರದಲ್ಲಿ ಡಿಕೆಶಿ ಸಹೋದರರು ಮನ ಬಂದಂತೆ ನಡೆದುಕೊಂಡು ಬಂದಿದ್ದಾರೆ. ಏನು ಮಾಡಿದ್ರು ನಾವು ಜಯಸಿಕೊಳ್ಳುತ್ತೇವೆ ಅನ್ನೋ ರೀತಿ ವರ್ತಿಸಿದ್ದಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಸಹೋದರರು ಮನ ಬಂದಂತೆ ನಡೆದುಕೊಂಡು ಬಂದಿದ್ದಾರೆ. ಕೇವಲ ಅವರುಗಳ ವರ್ಚಸ್ಸು, ಪ್ರತಿಷ್ಠೆ, ಸ್ವಾರ್ಥಕ್ಕೆ ಆದ್ಯತೆ ಕೊಟ್ಟು ಬದುಕಿ, ಬಾಳುತ್ತಿದ್ದಾರೆ.
ರಾಮನಗರದ ಜನರಿಗೆ ಇದು ಸಾಕಾಗಿದೆ. ನಿಮ್ಮ ಸಾಧನೆಯನ್ನು ಕೆಲಸದಲ್ಲಿ ತೋರಿಸಬೇಕು. ಜಿಲ್ಲೆಯಲ್ಲಿ ಯಾವ ಯಾವ ಅಭಿವೃದ್ಧಿ ಕೆಲಸ ಮಾಡಿದ್ದೀರಿ ಅಂತಾ ಕೇಳಿದ್ರೆ ಅವರ ಬಳಿ ಉತ್ತರವಿಲ್ಲ ಎಂದು ಕಿಡಿಕಾರಿದರು.
ಡಿಕೆಶಿ ಸಹೋದರರ ವಿರುದ್ಧ ಸಚಿವ ಅಶ್ವತ್ಥ್ ನಾರಾಯಣ್ ವಾಗ್ದಾಳಿ ನಡೆಸಿರುವುದು.. ಮೇಕೆದಾಟು ಪಾದಯಾತ್ರೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿರ್ಬಂಧ ವಿಧಿಸಲಾಗಿದೆ. ನಿಯಮಗಳನ್ನು ಉಲ್ಲಂಘನೆ ಮಾಡಿದ್ರೆ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದರು.