ಕರ್ನಾಟಕ

karnataka

ETV Bharat / city

VIDEO: ವಿದ್ಯುತ್ ಬಿಲ್‌ ಕೇಳಲು ಮನೆಗೆ ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ - ಹೆಸ್ಕಾಂ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ವಿದ್ಯುತ್ ಬಿಲ್‌ (Electricity bill) ಕೇಳಲು ಮನೆಗೆ ಹೋದ ಹೆಸ್ಕಾಂ ‌(Hescom) ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.

assult on Hescom staff
ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರು

By

Published : Nov 13, 2021, 12:11 PM IST

ಚಿಕ್ಕೋಡಿ: ವಿದ್ಯುತ್ ಬಿಲ್‌ (Electricity bill) ಕೇಳಲು ಮನೆಗೆ ಹೋದ ಹೆಸ್ಕಾಂ (Hescom) ಸಿಬ್ಬಂದಿಗೆ ಗ್ರಾಮಸ್ಥರು ಥಳಿಸಿರುವ ಘಟನೆ‌ ಕರೋಶಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿರುವ ಮನೆಯೊಂದಕ್ಕೆ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಹೆಸ್ಕಾಂ ಸಿಬ್ಬಂದಿ ಒತ್ತಾಯಿಸಿದ್ದಾರೆ. ಈ ವೇಳೆ, ಕುಟುಂಬಸ್ಥರು ಮತ್ತು ಹೆಸ್ಕಾಂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಹೆಸ್ಕಾಂ ಸಿಬ್ಬಂದಿ ಮೇಲೆ‌ ಅಲ್ಲಿನ ಗ್ರಾಮಸ್ಥರು ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರು

ಕರ್ತವ್ಯ ನಿರತ ಸಿಬ್ಬಂದಿ ಕೊರಳಿನ ಪಟ್ಟಿ ಹಿಡಿದು ಎಳೆದಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಈ‌ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details